ಮಡಿಕೇರಿ, ಏ. ೨೫: ಕೊಡಗು ಜಿಲ್ಲಾ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ೨೦೨೬-೨೭ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶಾತಿ ಪ್ರಾರಂಭವಾಗಿದೆ.

ಬಿಎ ಮತ್ತು ಬಿಕಾಂ ಪ್ರವೇಶಕ್ಕೆ ವಿದ್ಯಾರ್ಥಿಗಳು (ಆಕಾಂಕ್ಷಿಗಳು) ಆದಷ್ಟು ಬೇಗನೆ ಕಾಲೇಜಿನಲ್ಲಿ ಪ್ರವೇಶ ಪಡೆದುಕೊಳ್ಳಬಹುದು. ಕಾಲೇಜಿನಲ್ಲಿ ನುರಿತ ಶಿಕ್ಷಕ ವೃಂದ, ಸ್ಮಾರ್ಟ್ ಕ್ಲಾಸ್ ಸೌಲಭ್ಯ, ಸುಸಜ್ಜಿತ ಗ್ರಂಥಾಲಯ, ಕಾಲೇಜಿನಲ್ಲಿ ಸಿಸಿ ಕ್ಯಾಮರಾ ವ್ಯವಸ್ಥೆ, ವೈಪೈ ಸೌಲಭ್ಯ ಇರುತ್ತದೆ.

ಪಠ್ಯೇತರ ಚಟುವಟಿಕೆಗಳಾದ ಎನ್‌ಎಸ್‌ಎಸ್, ರೋವರ್ಸ್ ಮತ್ತು ರೇಂಜರ್ಸ್, ರೆಡ್ ರಿಬ್ಬನ್ ಕ್ಲಬ್ ಮತ್ತು ಯುವ ರೆಡ್ ಕ್ರಾಸ್, ಯೋಗ ಮತ್ತು ಸರಳ ವ್ಯಾಯಾಮ.

ಮಹಿಳಾ ದೌರ್ಜನ್ಯ ನಿರ್ಮೂಲನಾ ಸಮಿತಿ, ಕ್ರೀಡೆ, ವಿದ್ಯಾರ್ಥಿಗಳ ಭ್ರಾತೃತ್ವ ವೇದಿಕೆ, ಅಂತರ್ ಕಾಲೇಜು ವಿದ್ಯಾರ್ಥಿಗಳ ಕಲಿಕಾ ವಿನಿಮಯ, ಸಾಂಸ್ಕೃತಿಕ ವೇದಿಕೆ ಕಾರ್ಯಕ್ರಮಗಳು ಇರುತ್ತದೆ. ವಿದ್ಯಾರ್ಥಿಗಳ ಆಪ್ತ ಸಮಾಲೋಚನೆ, ವೃತ್ತಿ ಮಾರ್ಗದರ್ಶನ ಮತ್ತು ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆಗಳು ಮತ್ತಿತರ ಸೌಲಭ್ಯಗಳು ಕಾಲೇಜಿನಲ್ಲಿ ಇರುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಕಟಣೆ ತಿಳಿಸಿದೆ.