ಮಡಿಕೇರಿ, ಏ. ೨೬: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತವಾಗಿ ಸಂಯೋಜನೆಗೊAಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್(ಬಿ.ವಿ.ಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್ಗಳ ‘ರಾಷ್ಟಿçÃಯ ಶಿಕ್ಷಣ ಪದ್ಧತಿ ಯನ್ವಯ ದೃಶ್ಯ ಕಲೆಯಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿವಿಎ. ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಹಾಗೂ ದ್ವಿತೀಯ ಪಿಯುಸಿಗೆ ಸಮಾನಾಂತರ ಕೋರ್ಸು ಮಾಡಿರುವ ಅಭ್ಯರ್ಥಿಗಳಿಂದ ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶಾತಿ ಅಧಿಸೂಚನೆಯಂತೆ ಆನ್ಲೈನ್ (ಯುಯುಸಿಎಂಎಸ್) ಮೂಲಕ ಮೇ ೩೦ ರವರೆಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಪದವಿಯಲ್ಲಿ ೩ನೇ ಸೆಮಿಸ್ಟರ್ ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ(ಅಚ್ಚಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸದ hಣಣs://uuಛಿms.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ hಣಣs://ತಿತಿತಿ.ಛಿಚಿvಚಿmಥಿsoಡಿe.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಸಂದರ್ಶನದ ದಿನಾಂಕದ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು.
ಹೆಚ್ಚಿನ ಮಾಹಿತಿಗೆ ಈ ಕಾರ್ಯಾಲಯದ ಸಹಾಯವಾಣಿಗೆ ಕಚೇರಿ ಸಮಯದಲ್ಲಿ ೦೮೨೧-೨೪೩೮೯೩೧ ನ್ನು ಸಂಪರ್ಕಿಸಬಹುದು ಎಂದು ಮೈಸೂರು ಸಿದ್ದಾರ್ಥನಗರ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು(ಕಾವಾ) ಡೀನ್ ತಿಳಿಸಿದ್ದಾರೆ.