ಮಡಿಕೇರಿ, ಏ. ೨೭: ಬಿ.ಜೆ.ಪಿ ನಿಜವಾಗಿಯೂ ನಾರಿಶಕ್ತಿ ಪರವಾಗಿದ್ದರೆ ಡೀಲಿಮಿಟೇಷನ್ ಇಲ್ಲದೆಯೇ ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇ.೩೩ರಷ್ಟು ಮೀಸಲಾತಿಯನ್ನು ತರಬಹುದಿತ್ತು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ಮಂಗಳೂರು ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ ಅವರು ಅಭಿಪ್ರಾಯಪಟ್ಟರು.

ಈ ಸಂಬAಧ ಇಂದು ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆ ಸಂಬAಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾರ್ಗದರ್ಶನದಲ್ಲಿ ರಾಜ್ಯದ ವಿವಿಧೆಡೆ ಸುದ್ದಿಗೋಷ್ಠಿ ನಡೆಸಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯುತ್ತಿದೆ ಎಂದರು.

ಕಾಂಗ್ರೆಸ್ ಪಕ್ಷವು ನಾರಿಶಕ್ತಿ ವಿರೋಧಿ ಎಂಬ ಬಿ.ಜೆ.ಪಿಯ ಆರೋಪವನ್ನು ಅಲ್ಲಗಳೆದ ಅವರು, ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ, ಮೊದಲ ಮಹಿಳಾ ಮುಖ್ಯಮಂತ್ರಿ ಸುಚೇತಾ ಕೃಪಾಲಾನಿ, ಮೊದಲ ಮಹಿಳಾ ರಾಷ್ಟçಪತಿ ಪ್ರತಿಭಾ ಪಾಟೀಲ್ ಎಲ್ಲರೂ ಕಾಂಗ್ರೆಸ್ ನವರೇ ಆಗಿದ್ದರು. ಕಾಂಗ್ರೆಸ್ ನಾರಿಶಕ್ತಿ ಪರ ಎಂಬುದಕ್ಕೆ ಇದು ಉದಾಹರಣೆಯಾಗಿದೆ ಎಂದರು. ನಾರಿಶಕ್ತಿಯಲ್ಲಿ ಕಾಂಗ್ರೆಸ್ ಪ್ರಮುಖ ಪಾತ್ರ ವಹಿಸಿದ್ದು ಬಿ.ಜೆ.ಪಿ. ಕೇವಲ ಮಾತಿಗೆ ಮಾತ್ರ ಸೀಮಿತವಾಗಿದೆ ಎಂದರು.

ಕಾಂಗ್ರೆಸ್‌ನಿAದಲೇ ಪಂಚಾಯತ್ ರಾಜ್‌ನಲ್ಲಿ ಮಹಿಳಾ ಮೀಸಲಾತಿ ಮೂಲಕ ಇಂದು ಹಲವಾರು ಮಹಿಳೆಯರು ಮುಂದೆ ಬಂದಿದ್ದಾರೆ. ಹೆಣ್ಣು ಮಕ್ಕಳ ಸ್ವಾವಲಂಬಿ ಬದುಕಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಕೂಡ ಕಾಂಗ್ರೆಸ್ ಜಾರಿಗೆ ತರುವ ಮೂಲಕ ದೇಶಕ್ಕೆ ಮಾದರಿಯಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಮಾಜಿ ಜಿ.ಪಂ. ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಫಿಲೋಮಿನಾ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೂಪಾ ಭೀಮಯ್ಯ ಹಾಜರಿದ್ದರು.