ಮಡಿಕೇರಿ, ಏ. ೨೭: ರಾಜ್ಯದ ಶಾಲೆಗಳಲ್ಲಿ ಪ್ರತಿದಿನ ೧೦ ನಿಮಿಷ ಕನ್ನಡ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.
ಎಲ್ಲಾ ಸರಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಬೆಳಗ್ಗಿನ ಪ್ರಾರ್ಥನೆ ನಂತರ ವಿದ್ಯಾರ್ಥಿಗಳು ಕನ್ನಡ ಪತ್ರಿಕೆಯನ್ನು ಓದಬೇಕು. ಶಾಲೆಗಳಲ್ಲಿ ಪ್ರತಿದಿನ ಕನಿಷ್ಟ ೧೦ ರಿಂದ ೧೫ ನಿಮಿಷ ಪತ್ರಿಕೆ ಓದುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಸಹಾಯವಾಗುತ್ತದೆ. ಪ್ರಚಲಿತ ವಿದ್ಯಮಾನಗಳ ಬಗ್ಗೆ ಜ್ಞಾನ ಹೆಚ್ಚುತ್ತದೆ. ಪದಸಂಪತ್ತು, ಭಾಷೆ ಹಾಗೂ ಬರವಣಿಗೆ ಕೌಶಲ್ಯ ಉತ್ತಮವಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಶ್ಮಿ ಮಹೇಶ್ ತಿಳಿಸಿದ್ದಾರೆ.