ವೀರಾಜಪೇಟೆ, ಏ. ೨೭: ಹೆಗ್ಗಳ ಗ್ರಾಮದ ಬೂದಿಮಾಳ ಶ್ರೀ ಕಿರಾತೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವ ಹಾಗೂ ಮಹಾಪೂಜೆ ಶ್ರದ್ಧಾ ಭಕ್ತಿಯಿಂದ ಜರುಗಿತು.
ಹಬ್ಬದ ಪ್ರಯುಕ್ತ ಬೆಳಿಗ್ಗಿನಿಂದಲೇ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಕ್ಷೇತ್ರದ ಶ್ರೀ ಮಹಾಗಣಪತಿ, ವನದುರ್ಗೆ, ಶ್ರೀ ಕಿರಾತೇಶ್ವರ ದೇವರಿಗೆ ವಿಶೇಷ ಪೂಜೆ, ಸಂಕಲ್ಪ ಪೂಜೆ, ಪ್ರಾರ್ಥನೆ ಹಾಗೂ ಪಂಚಾಮೃತ ಅಭಿಷೇಕ, ಎಳನೀರು ಅಭಿಷೇಕ, ಅಲಂಕಾರ ಪೂಜೆ, ವಿಶೇಷ ಅರ್ಚನೆ ಬಳಿಕ ಮಹಾ ಮಂಗಳಾರತಿ, ತೀರ್ಥಪ್ರಸಾದ ವಿತರಣೆ ಜರುಗಿತು.
ಕೇರಳದ ಚಂಡೆ ಬಳಗದವರಿಂದ ಚಂಡೆ ಸೇವೆ, ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪಕ ದೇವಪ್ಪ ಪೂಜಾರಿ, ಭಕ್ತಾದಿಗಳು ಉಪಸ್ಥಿತರಿದ್ದರು.