ೆÆÃಮವಾರಪೇಟೆ, ಏ. ೨೭: ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ನಿರ್ಲಕ್ಷö್ಯ ವಹಿಸಿದ್ದು, ತಕ್ಷಣ ಚುನಾವಣೆ ನಡೆಸಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಸೋಮವಾರಪೇಟೆ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಯಿತು.

ರಾಜ್ಯಾದ್ಯಂತ ಗ್ರಾಮ ಪಂಚಾಯಿತಿಗಳ ಅವಧಿ ಮುಕ್ತಾಯಗೊಂಡು ೩ ತಿಂಗಳು ಕಳೆದಿದೆ. ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳ ಅಧಿಕಾರ ಅವಧಿ ಮುಗಿದು ೫ ವರ್ಷ ಕಳೆದರೂ ಯಾವುದೇ ಚುನಾವಣೆಗಳನ್ನು ನಡೆಸದೇ ಸ್ಥಳೀಯ ಜನ ಸಾಮಾನ್ಯರ ಅಹವಾಲುಗಳನ್ನು ಸ್ವೀಕರಿಸಲು ಮತ್ತು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರು ಮಾತನಾಡುವ ಹಕ್ಕುಗಳನ್ನು ಸರ್ಕಾರ ಕಸಿದುಕೊಂಡಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾಜೀ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ರಾಜ್ಯ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಅಭಿವೃದ್ಧಿ ಕಾರ್ಯಗಳು ಕುಂಠಿತಗೊAಡಿವೆ. ರಸ್ತೆಗಳ ಗುಂಡಿ ಮುಚ್ಚಲೂ ಸಹ ಸರ್ಕಾರದ ಬಳಿ ಹಣವಿಲ್ಲದಂತಾಗಿದೆ. ರಾಜ್ಯದ ಬೊಕ್ಕಸವನ್ನು ಬರಿದು ಮಾಡಿರುವ ಕಾಂಗ್ರೆಸ್ ಸರ್ಕಾರ ಇದೀಗ ಚುನಾವಣೆ ನಡೆಸಲೂ ಸಹ ಮುಂದಾಗುತ್ತಿಲ್ಲ ಎಂದು ದೂರಿದರು.

ಲೋಕೋಪಯೋಗಿ ಇಲಾಖೆ ಹಾಗೂ ಜಿ.ಪಂ. ಇಂಜಿನಿಯರಿAಗ್ ವಿಭಾಗಕ್ಕೆ ವಾರ್ಷಿಕ ರಸ್ತೆಗಳ ನಿರ್ವಹಣೆಗೆ ಅನುದಾನ ಬರುತ್ತಿದ್ದರೂ ಸಹ ರಸ್ತೆಯ ನಿರ್ವಹಣೆ ಆಗುತ್ತಿಲ್ಲ. ಕೆಎಸ್‌ಆರ್‌ಟಿಸಿ ಚಾಲಕರು ಹಾಗೂ ನಿರ್ವಾಹಕರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಪಾವತಿಸುತ್ತಿಲ್ಲ. ಸರ್ಕಾರ ದಿವಾಳಿಯಾಗಿದೆ. ಚಿಕ್ಕಾಸೂ ಇಲ್ಲ. ಚುನಾವಣೆ ನಡೆಸಲೂ ಸಹ ಸರ್ಕಾರದ ಬಳಿ ಹಣವಿಲ್ಲ ಎಂದು ಟೀಕಿಸಿದರು.

ಗ್ರಾ.ಪಂ., ತಾ.ಪಂ. ಹಾಗೂ ಜಿ.ಪಂ. ಚುನಾವಣೆಗಳನ್ನು ನಡೆಸದೇ ಇರುವುದರಿಂದ ಸ್ಥಳೀಯ ಜನರು ಮೂಲಭೂತ ಸೌಕರ್ಯಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. ೫೦ ರಷ್ಟು ಮತ್ತು ಪರಿಶಿಷ್ಟ ಜಾತಿ ಪಂಗಡದವರಿಗೆ ೧೫ ರಷ್ಟು ಮೀಸಲಾತಿಗಳು ಇದ್ದು, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ನಡೆಸದೇ ಭಾರೀ ಅನ್ಯಾಯ ಎಸಗಲಾಗುತ್ತಿದೆ ಎಂದು ಆರೋಪಿಸಿದರು.

ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವ ಸಂದರ್ಭ ಒಬ್ಬ ಅಧಿಕಾರಿಯನ್ನು ೩ ರಿಂದ ೪ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಸಮಯಕ್ಕೆ ಸರಿಯಾಗಿ ಆಡಳಿತಾಧಿಕಾರಿಗಳು ಲಭ್ಯರಾಗದ ಹಿನ್ನೆಲೆ ಜನಸಾಮಾನ್ಯರಿಗೆ ಸಮಸ್ಯೆಯಾಗಿದೆ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಮಾತನಾಡಿ, ಅಧಿಕಾರ ವಿಕೇಂದ್ರೀಕರಣದ ಬದಲು ಕಾಂಗ್ರೆಸ್ ಸರ್ಕಾರ ಅಧಿಕಾರ ಕೇಂದ್ರೀಕರಣದ ಮೂಲಕ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು. ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ಆರ್ಥಿಕ, ಸಾಮಾಜಿಕ, ಭೌದ್ಧಿಕವಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ. ಸ್ಥಳೀಯ ಸಂಸ್ಥೆಗಳು ಇಲ್ಲದಿದ್ದರೆ ಗ್ರಾಮಗಳ ಅಭಿವೃದ್ಧಿ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರಲ್ಲದೇ, ಜನರ ಹಕ್ಕುಗಳನ್ನು ಕಸಿಯುವ ಕಾಂಗ್ರೆಸ್‌ನ ನಿರ್ಧಾರಕ್ಕೆ ಜನರು ತಕ್ಕಪಾಠ ಕಲಿಸಲಿದ್ದಾರೆ ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್ ಗೌಡ ಹಾಗೂ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಮಾತನಾಡಿ, ತಕ್ಷಣ ಚುನಾವಣೆಗಳನ್ನು ನಡೆಸದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಸಂಘಟಿಸಲಾಗುವುದು. ಕಚೇರಿಗಳಿಗೆ ಬೀಗ ಜಡಿಯಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರುಗಳಾದ ವಿ.ಕೆ. ಲೋಕೇಶ್, ಎಸ್.ಆರ್. ಸೋಮೇಶ್, ಮನುಕುಮಾರ್ ರೈ, ಬಿ.ಜೆ. ದೀಪಕ್, ದರ್ಶನ್ ಜೋಯಪ್ಪ, ಮೋಹಿತ್ ತಿಮ್ಮಯ್ಯ, ಮೋಕ್ಷಿಕ್ ರಾಜ್, ಶರತ್‌ಚಂದ್ರ, ಎನ್.ಆರ್. ಅಜೀಶ್‌ಕುಮಾರ್, ಅನಂತ್‌ಕುಮಾರ್, ಭಾಸ್ಕರ್ ನಾಯಕ್, ಭುವನೇಂದ್ರ, ಬಿ.ಎ. ಧರ್ಮಪ್ಪ, ಟಿ.ಕೆ. ರಮೇಶ್, ಕೆ.ಕೆ ಸುಧಾಕರ್, ದಿವಾಕರ್, ಕುಶಾಲಪ್ಪ, ಕವಿತಾ ವಿರೂಪಾಕ್ಷ, ಸವಿತ ಸತೀಶ್, ಇಂದಿರಾ ಮೋಣಪ್ಪ, ಜಯಲಕ್ಷ್ಮೀ, ರೂಪಾ ಸತೀಶ್ ಸೇರಿದಂತೆ ಇತರರು ಇದ್ದರು.