ÀÄ್ತ ವಿಧಾನಸಭಾ ಕ್ಷೇತ್ರ : ಸಿಎನ್‌ಸಿಯಿಂದ ಅಭಿಯಾನ

* ತಲಕಾವೇರಿಯಿಂದ ಆರಂಭ

ಮಡಿಕೇರಿ, ಏ. ೨೯: ಕ್ಷೇತ್ರ ಪುನರ್ ವಿಂಗಡಣೆಯ ಸಂದರ್ಭ ಕೊಡವರಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಮತ್ತು ವಿಧಾನಸಭಾ ಕ್ಷೇತ್ರವನ್ನು ಘೋಷಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಮೇ ೧ ರಿಂದ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮೇ ೧ ರಂದು ಬೆಳಿಗ್ಗೆ ೯ ಗಂಟೆಗೆ ಕೊಡವರ ಪುಣ್ಯಕ್ಷೇತ್ರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಆದಿಮಸಂಜಾತ ಮೂಲನಿವಾಸಿ, ಏಕ-ಜನಾಂಗೀಯ, ಪ್ರಕೃತಿ ಆರಾಧಕ-ಅನಿಮಿಸ್ಟಿಕ್ ಕೊಡವರಿಗಾಗಿ ಕೊಡವ ಪ್ರದೇಶದ ಗಡಿಗಳನ್ನು ಬದಲಾಯಿಸದೆ ಕೊಡವ ಸಾಂಪ್ರದಾಯಿಕ ನೆಲೆಯಲ್ಲೇ ಪ್ರತ್ಯೇಕ ಕೊಡವ ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರಗಳನ್ನು ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಿ.ಎನ್.ಸಿ. ಮುಂದಿರಿಸಿರುವ ಈ ಬೇಡಿಕೆಗಳನ್ನು ಮುಂದಿಟ್ಟುಕೊAಡು ಸಿಎನ್‌ಸಿ ಕೊಡವ ಪ್ರದೇಶದಾದ್ಯಂತ ಶಾಂತಿಯುತ ಅಭಿಯಾನವನ್ನು ಪ್ರಾರಂಭಿಸಲು ಸಜ್ಜಾಗಿದೆ. ಆರಂಭಿಕವಾಗಿ ಸಿಎನ್‌ಸಿ ಸ್ವಯಂ ಸೇವಕರು ಕೊಡವ ಪವಿತ್ರ ಯಾತ್ರಾಸ್ಥಳವಾದ ತಲಕಾವೇರಿಯಲ್ಲಿ ಧಾರ್ಮಿಕ ಪ್ರಾರ್ಥನೆ ಸಲ್ಲಿಸಿ, ನಮ್ಮ ಸಾಂವಿಧಾನಿಕ ಕಾರ್ಯಕ್ಕಾಗಿ ದೈವಿಕ ಆಶೀರ್ವಾದವನ್ನು ಕೋರುತ್ತೇವೆ ಎಂದು ತಿಳಿಸಿದ್ದಾರೆ.