ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆಯ ಫೈನಲ್ಸ್ ಮತ್ತು ಸಮಾರೋಪ ಸಮಾರಂಭ ಮೇ ೧ ರಂದು ನಡೆಯಲಿದೆ.

ಬೇತ್ರಿ ಮುಕ್ಕಾಟಿರ ಪಟ್ಟೆದಾರ ಕಾಳಪ್ಪ ಹಾಗೂ ಕ್ರಿಕೆಟ್ ನಮ್ಮೆಯ ಅಧ್ಯಕ್ಷ ಸುರೇಶ್ ಪೆಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಿಗ್ಗೆ ೧೧ ಗಂಟೆಗೆ ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಸಾರಾ ಮಹೇಶ್ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು, ವೀರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಓಸ್ಪೆçà ಗ್ರೂಪ್ ನ ಮಾಚೆಟ್ಟಿರ ಜೆನಿತ್ ಅಯ್ಯಪ್ಪ, ಮೊಬಿಯಸ್ ಫೌಂಡೇಶನ್‌ನ ಮಣವಟ್ಟಿರ ಮಧು ಬೋಪಣ್ಣ, ವಿಶೇಷ ಆಹ್ವಾನಿತರಾಗಿ ಇಂಡಸ್ ಅಸಿಸ್ಟ್ ಪ್ರೆöÊವೇಟ್ ಲಿಮಿಟೆಡ್‌ನ ಎಸ್.ಬಾಲಚಂದ್ರ, ಕೊಡವ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷ ಕೀತಿಯಂಡ ಕಾರ್ಸನ್ ಹಾಗೂ ಉಪಾಧ್ಯಕ್ಷ ಚೇರಂಡ ಕಿಶನ್ ಉಪಸ್ಥಿತರಿರುವರು.