ಕೂಡಿಗೆ, ಏ. ೨೯ : ಕರ್ನಾಟಕ ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎಸ್. ಆರ್. ಅರುಣ್ ರಾವ್, ಮತ್ತು ನಾಪಂಡ ಮುತ್ತಪ್ಪ ಅವರ ಸಂಗಡಿಗರು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು, ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ. ಎಸ್. ಪೊನ್ನಣ್ಣ ಅವರನ್ನು ಸನ್ಮಾನಿಸಿದರು.

ಈ ಸಂದರ್ಭ ಕಾಂಗ್ರೆಸ್ ಮುಖಂಡ ನಾಪಂಡ ಮುತ್ತಪ್ಪ, ಚಿಕ್ಕತ್ತೂರು ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಪುರುಷೋತ್ತಮ್, ಐ.ಎನ್.ಟಿ ಸಿ. ಘಟಕದ ಜಿಲ್ಲಾ ಅಧ್ಯಕ್ಷ ಬಿ.ಡಿ. ಅಣ್ಣಯ್ಯ,ಅಜ್ಜಳ್ಳಿ ರವಿ, ತ್ರೀಣೇಶ್, ಮಲ್ಲೇಶ್, ಕೂಡಿಗೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶಿವಕುಮಾರ್, ಜಿಲ್ಲಾ ಯೂನಿಯನ್ ಸಹಕಾರ ಬ್ಯಾಂಕ್ ನಿರ್ದೇಶಕ ಎಸ್. ಆರ್. ಸುನಿಲ್ ರಾವ್, ತಿತಿಮತಿ ಲ್ಯಾಂಪ್ಸ್ ಸಹಕಾರ ಸಂಘದ ಅಧ್ಯಕ್ಷ ಪಿ.ಕೆ. ಮಣಿ ಕೂನ್ಯ, ಉಪಾಧ್ಯಕ್ಷೆ ಪುಷ್ಪ, ವೀರಾಜಪೇಟೆ ತಾಲೂಕು ಯರವರ ಸಂಘದ ಅಧ್ಯಕ್ಷ ಸಿದ್ದಪ್ಪ, ಎಂ.ಎನ್ ನಾಗೇಶ್, ಗೋವಿಂದ ರಾಜ್, ಸೇರಿದಂತೆ ಮತ್ತಿತರರು ಇದ್ದರು.