ಮಡಿಕೇರಿ, ಏ. ೨೯: ಮೈಸೂರಿನಲ್ಲಿ ವಿಶೇಷಚೇತನರಿಗೆ ಡಿಪ್ಲೋಮ ಮಟ್ಟದಲ್ಲಿ ತಾಂತ್ರಿಕ ಶಿಕ್ಷಣ ಸೌಲಭ್ಯ ಕಲ್ಪಿಸುವ ಸದುದ್ದೇಶದಿಂದ ಜೆಎಸ್‌ಎಸ್ ಮಹಾವಿದ್ಯಾಪೀಠವು ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕನ್ನು ಸ್ಥಾಪನೆ ಮಾಡಿದ್ದು, ಈ ನಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದ ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ(೨೦೨೬-೨೭) ಸಾಲಿಗೆ ಅನುದಾನಿತ ಕೋರ್ಸುಗಳಾಗದ ಆರ್ಕಿಟೆಕ್ಟರ್ ಅಸಿಸ್ಟೆಂಟ್‌ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿAಗ್, ಅನುದಾನ ರಹಿತ ಕೋರ್ಸುಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿAಗ್, ಕಂಪ್ಯೂಟರ್ ಅಪ್ಲಿಕೇಷನ್ಸ್(ಫಾರ್ ವಿಜ್ಯುವಲಿ ಎಂಪರ‍್ಡ್), ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ ಮತ್ತು ಎಲೆಕ್ಟಿçಕಲ್ ಎಂಜಿನಿಯರಿAಗ್ ಮತ್ತು ಎಲೆಕ್ಟಿçಕ್ ವೆಹಿಕಲ್ ಟೆಕ್ನಾಲಜಿ ಮೂರು ವರ್ಷಗಳ ಅವಧಿಯ ಡಿಪ್ಲೋಮ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹಾಗೂ ಮೂಳೆ ಮತ್ತು ಕೀಲು ಅಂಗವಿಕಲತೆ-ಶೇ.೪೦ ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ-೬೦ ಡಿಬಿ ಮತ್ತು ಮೇಲ್ಪಟ್ಟು, ಅಂಧತ್ವ-೬/೬೦ ಅಥವಾ ೨೦/೨೦೦ ಸ್ನೆಲೆನ್(ಕಂಪ್ಯೂಟರ್ ಅಪ್ಲಿಕೇಷನ್ಸ್(ಫಾರ್ ವಿಜ್ಯುವಲಿ ಇಂಪರ‍್ಡ್) ಕೋರ್ಸಿಗೆ ಅಂಗವೈಕಲ್ಯತೆಯ ಲಕ್ಷಣ ಹೊಂದಿರಬೇಕು. ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟç ಮಟ್ಟದ ವಿದ್ಯಾರ್ಥಿ ವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್‌ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರುಗಳಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿದೆ. ಪ್ರವೇಶಕ್ಕೆ ಅರ್ಜಿಯನ್ನು ಜೆಎಸ್‌ಎಸ್ ಮಹಾವಿದ್ಯಾಪೀಠ ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು-೫೭೦೦೦೬ ವಿಳಾಸದಿಂದ (ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.೨೦೦ ಹಾಗೂ ಎಸ್‌ಸಿ, ಎಸ್‌ಟಿ, ಸಿ-೧ ವರ್ಗದವರಿಗೆ ರೂ.೧೦೦) ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವAತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ತಿತಿತಿ.ರಿssಠಿಜಚಿ.oಡಿg ಇ-ಮೇಲ್/ ಮೊಬೈಲ್ ೯೮೪೪೬೪೪೯೩೭ ನ್ನು ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜೂನ್, ೦೫ ರೊಳಗೆ ಕಚೇರಿಗೆ ಸಲ್ಲಿಸಬೇಕು ಎಂದು ಮೈಸೂರು ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರು ತಿಳಿಸಿದ್ದಾರೆ.