ಮಡಿಕೇರಿ, ಏ. ೨೯ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿAದ ೨೦೨೬ ರ ದ್ವಿತೀಯ ಪಿಯುಸಿ ಪರೀಕ್ಷೆ-೨ ನ್ನು ಏಪ್ರಿಲ್, ೩೦ ರಿಂದ ಮೇ, ೧೩ ರವರೆಗೆ ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ದ್ವಿತೀಯ ಪಿಯುಸಿ ಪರೀಕ್ಷೆ-೨ನ್ನು ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ ರ ಕಲಂ ೧೬೩ ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ. ಈ ಆದೇಶವು ಪರೀಕ್ಷಾ ದಿನಗಳಂದು ಬೆಳಗ್ಗೆ ೯ ಗಂಟೆಯಿಮದ ಸಂಜೆ ೫.೩೦ ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ತಿಳಿಸಿದ್ದಾರೆ.