ಗೋಣಿಕೊಪ್ಪಲು. ಏ.೨೯: ಕೊಡಗು ಹೆಗ್ಗಡೆ ವಿಧ್ಯಾಭಿವೃದ್ದಿ ಸಂಘ ಹಾಗೂ ಸಮಾಜದ ವತಿಯಿಂದ ೨೬ನೇ ವರ್ಷದ ಕ್ರೀಡೋತ್ಸವ ಮೇ ೧ರಿಂದ ೩ರವರೆಗೆ ಹಾತೂರುವಿನ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜರುಗಲಿದೆ. ಮೇ ೧ರ ಶುಕ್ರವಾರ ಬೆಳಿಗ್ಗೆ ೧೦.೩೦ ಗಂಟೆಗೆ ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷರಾದ ಕೊರಕುಟ್ಟಿರ ಸರ ಚಂಗಪ್ಪ ಅಧ್ಯಕ್ಷತೆಯಲ್ಲಿ ಕ್ರೀಡಾಕೂಟ ಉದ್ಘಾಟನೆಗೊಳ್ಳಲಿದೆ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಸೇರಿದಂತೆ ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಸಮಾರೋಪ ಸಮಾರಂಭ ಮೇ.೩ರ ಮಧ್ಯಾಹ್ನ ೨.೩೦ಗಂಟೆಗೆ ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷರಾದ ಕೊರಕುಟ್ಟಿರ ಸರ ಚಂಗಪ್ಪ ಅಧ್ಯಕ್ಷತೆಯಲ್ಲಿ ಆರಂಭಗೊಳ್ಳಲಿದ್ದು ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲ, ಹೆಗ್ಗಡೆ ಸಮಾಜದ ಮಾಜಿ ಅಧ್ಯಕ್ಷ ಪಡಿಜ್ಞರಂಡ ಜಿ. ಅಯ್ಯಪ್ಪ, ಪೊಲೀಸ್ ಇಲಾಖೆಯ ಸರ್ಕಲ್ ಇನ್ಸ್ಪೆಕ್ಟರ್ ತುದಿಮಾಡ ಸವಿ ಲೋಕೇಶ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಕೃಷಿ ಇಲಾಖೆಯ ರಾಜ್ಯ ಪ್ರಶಸ್ತಿ ಪಡೆದ ಹಾಲುಗುಂದ ಗ್ರಾಮದ ಕೃಷಿಕ ಪಂದಿಕAಡ ಜಯ ಬೋಪಣ್ಣ, ಕಿಗ್ಗಾಲು ಗ್ರಾಮದ ಕೃಷಿಕ ಪಡಿಜ್ಞರಂಡ ರೇಣುಕುಮಾರ್,ರಾಷ್ಟಿçÃಯ ವೆಟ್ರನ್ ಅಥ್ಲೆಟಿಕ್ ಮೀಟ್ನಲ್ಲಿ ಸಾಧನೆ ಮಾಡಿದ ಮೂರೀರ ಶಾಂತಿ ಬೆಳ್ಯಪ್ಪ, ಅಚ್ಚಪಂಡ ಟೀನಾ ಸೋಮಣ್ಣರವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಟ್ರೋಫಿ ದಾನಿಗಳಾದ ನಿವೃತ್ತ ಸಬ್ ಇನ್ಸ್ಪೆಕ್ಟರ್ ಕೆ.ಎಸ್.ಆರ್ಪಿಯ ಕೊಂಗೆಪAಡ ಮಾಚಯ್ಯ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿದ ಸಮಾಜದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ ನಡೆಯಲಿದೆ.