ಮಡಿಕೇರಿ, ಏ. ೨೯: ವಿಚಾರಣಾಧೀನ ಖೈದಿಯೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಕುಶಾಲನಗರ ನಿವಾಸಿ ಚಂಗಪ್ಪ (೬೮) ಎಂಬವರೇ ಮೃತಪಟ್ಟವರಾಗಿದ್ದಾರೆ. ಪ್ರಕರಣವೊಂದರಲ್ಲಿ ಬಂದಿಸಲ್ಪಟ್ಟು ಮಡಿಕೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿದ್ದ ಚಂಗಪ್ಪ, ಮಧುಮೇಹ ಮತ್ತು ರಕ್ತದ ಒತ್ತಡದಿಂದ ಬಳಲುತ್ತಿದ್ದರು. ವರನ್ನು ತಾ.೨೭ ರಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರೆಸಲಾಗಿತ್ತಾದರೂ ತಾ. ೨೮ರ ರಾತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಚಾರಣಾಧೀನ ಖೈದಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಈ ಕುರಿತು ಮಾಹಿತಿ ನೀಡಿದ್ದರುಂದ ನ್ಯಾಯಾಧೀಶರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮೃತದೇಹವನ್ನು ಪರಿಶೀಲಿಸಿದರು. ಬಳಿಕ ಕಾನೂನು ಪ್ರಕ್ರಿಯೆ ನಡೆದ ನಂತರ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು.