ಮಡಿಕೇರಿ, ಏ. ೨೯; ಮಡಿಕೇರಿ ನಗರ ವ್ಯಾಪ್ತಿಯ ವಿದ್ಯಾನಗರದಲ್ಲಿರುವ ಶ್ರೀ ಶಕ್ತಿ ಗಣಪತಿ ದೇವಸ್ಥಾನದ ಮೂರನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ವಿವಿಧ ಪೂಜಾದಿ ಕಾರ್ಯಗಳೊಂದಿಗೆ ಹೋಮ, ಹವನ ನಡೆದು ಮಧ್ಯಾಹ್ನ ಮಹಾ ಮಂಗಳಾರತಿ ನೆರವೇರಿತು. ಬಳಿಕ ನೆರೆದಿದ್ದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.