ಮಡಿಕೇರಿ, ಏ. ೩೦: ಕೊಡಗು ವಿಶ್ವವಿದ್ಯಾಲಯ, ರಾಷ್ಟಿçÃಯ ಸೇವಾ ಯೋಜನೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ವತಿಯಿಂದ ನನ್ನ ಭಾರತಕ್ಕಾಗಿ ಯುವಜನತೆ-ಡಿಜಿಟಲ್ ಸಾಕ್ಷರತೆಗಾಗಿ ಯುವ ಜನತೆ’ ಎಂಬ ವಿಷಯದಡಿ ಮೇ ೪ ರವರೆಗೆ ಹಾಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ವಿಶೇಷ ಶಿಬಿರ ನಡೆಯಲಿದೆ.
ತಾ. ೨೮ ರಂದು ಮಧ್ಯಾಹ್ನ ಶಿಬಿರದ ಉದ್ಘಾಟನೆ ನಡೆಯಿತು. ತಾ. ೨೯ ರಂದು ಮಧ್ಯಾಹ್ನ ೩ ಗಂಟೆಗೆ ಎಚ್‌ಐವಿ ಮತ್ತು ಏಡ್ಸ್ ಕುರಿತು ಅರಿವು ಕಾರ್ಯಕ್ರಮ ನಡೆಯಲಿದೆ. ತಾ. ೩೦ ರಂದು ಮಧ್ಯಾಹ್ನ ೩ ಗಂಟೆಗೆ ಸ್ವಯಂ ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಗಳು’ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಮೇ ೧ ರಂದು ಮಧ್ಯಾಹ್ನ ೩ ಗಂಟೆಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ನಡೆಯಲಿದೆ. ಮೇ ೨ ರಂದು ಮಧ್ಯಾಹ್ನ ೩ ಗಂಟೆಗೆ ‘ಸೈಬರ್ ಅಪರಾಧ ಜಾಗೃತಿ’ ಕುರಿತು ಉಪನ್ಯಾಸ, ಮೇ ೩ ರಂದು ಮಧ್ಯಾಹ್ನ ೩ ಗಂಟೆಗೆ ಯುದ್ಧ ಮತ್ತು ಸಮಾಜ : ಪರಿಣಾಮ ಮತ್ತು ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಮೇ ೪ ರಂದು ಬೆಳಿಗ್ಗೆ ೧೦ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಎಚ್.ಪಿ. ನಿರ್ಮಲ, ವೀರಾಜಪೇಟೆ ಸೈಂಟ್ ಆನ್ಸ್ ಪದವಿ ಕಾಲೇಜಿನ ಉಪನ್ಯಾಸಕಿ ಪ್ರತಿಮಾ ಹರೀಶ್ ರೈ, ಹಾಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಟಿ.ಬಿ. ಕುಮಾರಸ್ವಾಮಿ, ಹಾಕತ್ತೂರು ಸ.ಹಿ.ಪ್ರಾ. ಶಾಲೆ ಎಸ್‌ಡಿಎಂಸಿ ಉಪಾಧ್ಯಕ್ಷ ಹರೀಶ್, ಸದಸ್ಯರಾದ ಜಯಂತಿ, ಗಂಗಾ, ಇತರರು ಪಾಲ್ಗೊಳ್ಳಲಿದ್ದಾರೆ.