ಮಡಿಕೆÃರಿ, ಮೇ ೨: ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ-೨೦೧೫ರ ನಿಯಮಗಳÀಡಿ ಪ್ರವಾಸೋದ್ಯಮ ಚಟುವಟಿಕೆ ನಡೆಸುವ ಸಲುವಾಗಿ ಹೋಂ-ಸ್ಟೇ ಹಾಗೂ ಇತರೆ ಹೆಸರುಗಳಿಂದ ಪ್ರವಾಸಿಗರಿಗೆ ವಸತಿ ಸೌಲಭ್ಯ ಕಲ್ಪಿಸುವವರು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕಿದೆ ಎಂದು ಪ್ರವಾಸೋದ್ಯಮ ಇಲಾಖೆ ಜಿಲ್ಲಾ ಉಪನಿರ್ದೇಶಕರು ಸೂಚಿಸಿದ್ದಾರೆ.
ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬAಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗದಿರುವ ಬಗ್ಗೆ ಜಿಲ್ಲಾಡಳಿತವು ಗಮನಿಸಿದ್ದು, ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಪ್ರವಾಸೋದ್ಯಮ ಇಲಾಖೆಯ ಮೂಲಕ ಸೂಚಿಸಿದೆ.
ನೋಂದಣಿಯಾಗದೇ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳು ಅನಧಿಕೃತ ಚಟುವಟಿಕೆಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು. ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ನಡೆಸುತ್ತಿರುವ ಹೋಂ-ಸ್ಟೇಗಳ ಪರವಾನಗಿಯನ್ನು ಈಗಾಗಲೇ ರದ್ದುಗೊಳಿಸಲಾಗಿದೆ. ಅದಾಗ್ಯೂ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಗಿ ಪಡೆದು ಕಾರ್ಯನಿರ್ವಹಿಸುತ್ತಿರುವ ಮತ್ತು ಪರವಾನಗಿ ಅವಧಿಯು ೫ ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿರುವ ಹೋಂ-ಸ್ಟೇಗಳು ಪರವಾನಗಿ ನವೀಕರಿಸುವಂತೆ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.
ಇವುಗಳಲ್ಲದೇ ಮಾಹಿತಿ ಇಲ್ಲದೆ ಅನಧಿಕೃತವಾಗಿ ನಡೆಸುತ್ತಿರುವಂತಹ ಹೋಂ-ಸ್ಟೇಗಳ ಬಗ್ಗೆ ಹಾಗೂ ಹೋಂ-ಸ್ಟೇ ನೋಂದಣಿ ಮಾಡಿಕೊಳ್ಳುವ ಬಗ್ಗೆ ಸಾರ್ವಜನಿಕರು ದೂರು/ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಉಪ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ೫೭೧೨೦೧ ದೂರವಾಣಿ ಸಂಖ್ಯೆ:೦೮೨೭೨-೨೦೦೫೧೯ ಅಥವಾ ಈ-ಮೇಲ್: ಜಜಞoಜಚಿguಣouಡಿism@gmಚಿiಟ.ಛಿom ಅಥವಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ದೂರವಾಣಿ ಸಂಖ್ಯೆ:೧೧೨ ಗೆ ತಿಳಿಸಬಹುದು ಎಂದು ಪ್ರಕಟಣೆ ತಿಳಿಸಿದೆ.