ಸಿಎನ್‌ಸಿಯಿಂದ ಅಭಿಯಾನ
ಮಡಿಕೇರಿ, ಮೇ ೨: ಪ್ರಾಚೀನ ಕೊಡವ ಸಾಂಪ್ರದಾಯಿಕ ಆವಾಸಸ್ಥಾನದ ಪ್ರಾದೇಶಿಕ ಮಿತಿಯೊಳಗೆ ಪ್ರತ್ಯೇಕ ಕೊಡವ ಪಾರ್ಲಿಮೆಂಟ್ ಮತ್ತು ಅಸೆಂಬ್ಲಿ ಕ್ಷೇತ್ರಗಳ ಸ್ಥಾಪನೆ ಅಥವಾ ಪರ್ಯಾಯವಾಗಿ ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ "ಸಂಘ" ಚುನಾವಣಾ ಕ್ಷೇತ್ರದ ಮಾದರಿಯಲ್ಲಿ ಆದಿಮಸಂಜಾತ ಏಕ-ಜನಾಂಗೀಯ ಪ್ರಕೃತಿ ಆರಾಧಕ ಕೊಡವರಿಗಾಗಿ ಪ್ರತ್ಯೇಕ ಅಮೂರ್ತ ಕೊಡವ ಪಾರ್ಲಿಮೆಂಟ್ ಮತ್ತು ಅಸೆಂಬ್ಲಿ ಕ್ಷೇತ್ರಗಳನ್ನು ರಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಸರಕಾರದ ಗಮನ ಸೆಳೆಯಲು ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯಿಂದ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಅಭಿಯಾನವನ್ನು ಆರಂಭಿಸಿತು.
ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ನೇತೃತ್ವದಲ್ಲಿ ತಲಕಾವೇರಿಯಲ್ಲಿ ಧಾರ್ಮಿಕ ಪ್ರಾರ್ಥನೆ ಸಲ್ಲಿಸಿ ಕೊಡವರ ಸಾಂವಿಧಾನಿಕ ಉದ್ದೇಶಕ್ಕಾಗಿ ದೈವಿಕ ಆಶೀರ್ವಾದವನ್ನು ಕೋರಿದ ಸದಸ್ಯರು ಮಾನವ ಸರಪಳಿ ಮೂಲಕ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಸಿಎನ್‌ಸಿ ಬೇಡಿಕೆಗಳ ಕುರಿತು ಆಡಳಿತ ವ್ಯವಸ್ಥೆಯ ಗಮನ ಸೆಳೆಯಲು ಮೇ ೧೨ ರಿಂದ ೪೮ ಗಂಟೆಗಳ ಹಗಲು-ರಾತ್ರಿ ಶಾಂತಿಯುತ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ಎನ್.ಯು. ನಾಚಪ್ಪ ತಿಳಿಸಿದರು. ಮುಂಬರುವ ಚುನಾವಣಾ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆಯಲ್ಲಿ ಶೇ. ೩೩ ರಷ್ಟು ಮಹಿಳಾ ಮೀಸಲಾತಿ ಮಸೂದೆಯಡಿ ಕೊಡವ ಮಹಿಳೆಯರಿಗೆ ಆಂತರಿಕ ಮೀಸಲಾತಿ ಕೋಟಾ ನೀಡಬೇಕು. ೨೦೨೭ರ ರಾಷ್ಟಿçÃಯ ಜನಗಣತಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ‘ಕೋಡ್ ಮತ್ತು ಕಾಲಂ' ಅನ್ನು ನಿಗದಿಪಡಿಸಬೇಕು. ಕೊಡವರಿಗೆ ಪ್ರತ್ಯೇಕ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರ ಘೋಷಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಮನವಿ ಪತ್ರವನ್ನು ಭಾರತದ ರಾಷ್ಟçಪತಿಗಳು, ಪ್ರಧಾನಮಂತ್ರಿಗಳು ಹಾಗೂ ಭಾರತದ ಮುಖ್ಯ ಚುನಾವಣಾ ಆಯೋಗಕ್ಕೆ ಕಳುಹಿಸಿಕೊಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬೊಟ್ಟಂಗಡ ಸವಿತಾ ಗಿರೀಶ್, ಅಪ್ಪಾರಂಡ ನಂದಿನಿ ನಂಜಪ್ಪ, ಅರೆಯಡ ಸವಿತಾ ತಿಮ್ಮಯ್ಯ, ಅಪ್ಪಾರಂಡ ನೀರು ಸೋಮಕ್ಕ, ಕಲಿಯಂಡ ಪ್ರಕಾಶ್, ಅಳ್ಮಂಡ ಜೈ ಗಣಪತಿ, ಪಟ್ಟಮಾಡ ಕುಶ, ನಂದೇಟಿರ ರವಿ ಸುಬ್ಬಯ್ಯ, ಬೊಟ್ಟಂಗಡ ಗಿರೀಶ್ ಪೆಮ್ಮಯ್ಯ, ಮಂದಪAಡ ಮನೋಜ್ ಮಂದಣ್ಣ, ಅರೆಯಡ ಗಿರೀಶ್ ತಿಮ್ಮಯ್ಯ, ಚಂಬAಡ ಜನತ್, ಕಿರಿಯಮಾಡ ಶೇರಿನ್, ಅಪ್ಪಾರಂಡ ಶ್ರೀನಿವಾಸ್, ಪುಟ್ಟೀಚಂಡ ಡಾನ್ ದೇವಯ್ಯ, ಚೋಳಪಂಡ ನಾಣಯ್ಯ, ಮಣವಟ್ಟಿರ ಚಿಣ್ಣಪ್ಪ, ಮಣವಟ್ಟಿರ ಜಗದೀಶ್, ಪುದಿಯೊಕ್ಕಡ ಕಾಶಿ ಕರುಂಬಯ್ಯ, ಪಟ್ಟಮಾಡ ಅಶೋಕ್, ಮೇದುರ ಕಂಠಿ ನಾಣಿಯಪ್ಪ, ಮಂಗೇರಿರ ಜಗದೀಶ್, ಕಲ್ಮಾಡಂಡ ಮೋಹನ್, ಕಲ್ಮಾಡಂಡ ವಾಸು ಉತ್ತಯ್ಯ, ಅಪ್ಪಾರಂಡ ತಿಮ್ಮಯ್ಯ, ಅರೆಯಡ ಸಾವನ್, ಕೊಟ್ಟುಕತ್ತಿರ ಬಾಬಿ ಪಳಂಗಪ್ಪ, ಕೊಟ್ಟುಕತ್ತಿರ ಗೌತಮ್ ಪೊನ್ನಣ್ಣ, ಸಾದೇರ ರಮೇಶ್, ಚೊಕ್ಕಂಡ ಕಟ್ಟಿ, ಅವರೆಮಾದಂಡ ಚೆಂಗಪ್ಪ ಹಾಗೂ ಅಚ್ಚಕಾಳೆರ ನವೀನ್ ಮೊಣ್ಣಪ್ಪ ಪಾಲ್ಗೊಂಡಿದ್ದರು.