ಮಡಿಕೇರಿ, ಮೇ ೩: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿ ಸಂಘ ಕಾಲೇಜು ಮೈದಾನದ ಬಳಿ ನಿರ್ಮಿಸಿರುವ ಫೈರಿಂಗ್ ರೇಂಜ್ ಮೇ ೫ ರಂದು ಉದ್ಘಾಟನೆಗೊಳ್ಳಲಿದೆ.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ಅಂದು ಬೆಳಿಗ್ಗೆ ೧೦ ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಕೊಡಗು ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರ ಹಾಗೂ ಎನ್‌ಸಿಸಿಯ ಕಮಾಂಡಿAಗ್ ಆಫೀಸರ್ ಕರ್ನಲ್ ರೆಜಿತ್ ಮುಕುಂದನ್ ಫೈರಿಂಗ್ ರೇಂಜ್‌ನ್ನು ಉದ್ಘಾಟಿಸಲಿದ್ದಾರೆ. ಫೀ.ಮಾ.ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ. ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಎನ್‌ಸಿಸಿಯ ಆಡಳಿತಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಶ್ರೀನಿವಾಸ್ ಎಸ್., ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಮುಕ್ಕಾಟಿರ ಎ. ಅಪ್ಪಯ್ಯ, ಫೀ.ಮಾ. ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಹಾಗೂ ವಕೀಲ ಮುಂಡÀAಡ ಸುದಯ್ ನಾಣಯ್ಯ ಹಾಗೂ ಉದ್ಯಮಿ ಪುರುಷೋತ್ತಮ್ ಪಿ. ಬೆಂಗಳೂರು ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಮಡಿಕೇರಿ ನಗರದ ಎಲ್ಲಾ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಎನ್‌ಸಿಸಿ ಶಿಬಿರಾರ್ಥಿಗಳಿಗೆ ಸಹಕಾರಿಯಾಗಬೇಕು ಎನ್ನುವ ಉದ್ದೇಶದಿಂದ ಫೈರಿಂಗ್ ರೇಂಜ್‌ನ್ನು ನಿರ್ಮಿಸಲಾಗಿದೆ. ಹಳೇ ವಿದ್ಯಾರ್ಥಿಗಳು ಹಾಗೂ ದಾನಿಗಳ ಸಹಕಾರದಿಂದ ಸುಮಾರು ರೂ. ೪.೯೫ ಲಕ್ಷ ವೆಚ್ಚದ ಯೋಜನೆ ಸಾಕಾರಗೊಂಡಿದೆ ಎಂದು ಬೊಳ್ಳಜಿರ ಬಿ. ಅಯ್ಯಪ್ಪ ತಿಳಿಸಿದ್ದಾರೆ.