ನಾಪೋಕ್ಲು, ಮೇ ೩: ಜಿಲ್ಲಾ ಕುಲಾಲ ಕುಂಬಾರ ಕ್ರೀಡೋತ್ಸವದ ಸಮ್ಮಿಲನ ೨೦೨೬ ಆಮಂತ್ರಣ ಪತ್ರಿಕೆ ಲೋಕಾರ್ಪಣೆ ಕಾರ್ಯಕ್ರಮ ಮಡಿಕೇರಿಯ ಶ್ರೀ ಕೋಟೆ ಗಣಪತಿ ದೇವಸ್ಥಾನದಲ್ಲಿ ಜರುಗಿತು.

ಕೊಡಗು ಜಿಲ್ಲಾ ಕುಲಾಲ ಕುಂಬಾರ ಬಾಂಧವರಿಗೆ ಕ್ರೀಡೋತ್ಸವ ಕೊಡಗು ಜಿಲ್ಲಾ (ಕುಂಬಾರ) ರ ಸಂಘ ಮಡಿಕೇರಿ ಇದರ ನೇತೃತ್ವದಲ್ಲಿ ಜಿಲ್ಲಾ ಯುವ ಘಟಕ ಮತ್ತು ಜಿಲ್ಲಾ ಮಹಿಳಾ ಘಟಕದ ಸಹಯೋಗದೊಂದಿಗೆ ಮೇ ೧೬ , ೧೭ ದಂದು ಮಡಿಕೇರಿಯ ಮ್ಯಾನ್ಸ್ ಕಾಂಪೌAಡಿನ ಕೆಳಗಿನ ಮೈದಾನದಲ್ಲಿ ಆಯೋಜಿಸಲಾಗಿದ್ದು ಇದರ ಸಮ್ಮಿಲನ ೨೦೨೬ ಆಮಂತ್ರಣ ಪತ್ರಿಕೆಯನ್ನು ಮಡಿಕೇರಿಯ ಶ್ರೀ ಕೋಟೆ ಗಣಪತಿ ದೇವಸ್ಥಾನದಲ್ಲಿ ಲೋಕಾರ್ಪಣೆ ಮಾಡಲಾಯಿತು .

ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸುವ ಮೂಲಕ ಬಿಡುಗಡೆ ಮಾಡಿದ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಅಧ್ಯಕ್ಷರಾದ ದಾಮೋದರ್ ಕೆ.ಕೆ ಅವರು ಮಾತನಾಡಿ ಕೊಡಗು ಜಿಲ್ಲೆಯ ಕುಲಾಲ ಕುಂಬಾರ ಬಾಂಧವರ ಇದು ಎರಡನೇ ವರ್ಷದ ಕಾರ್ಯಕ್ರಮವಾಗಿದೆ. ಈ ವರ್ಷವೂ ಬಹಳ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗುವುದು. ತಾರೀಕು ೧೬ರಂದು ಬೆಳಿಗ್ಗೆ ೭:೦೦ಗೆ ಶ್ರೀ ಓಂಕಾರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಕ್ರೀಡಾ ಜ್ಯೋತಿಯೊಂದಿಗೆ ಮೈದಾನಕ್ಕೆ ಕಾಲ್ನಡಿಗೆಯ ಮೂಲಕ ಸಾಗಿ ಗಣ್ಯರ ಸಮ್ಮುಖದಲ್ಲಿ ಕ್ರೀಡೋತ್ಸವ ಉದ್ಘಾಟನೆಗೊಳ್ಳಲಿದೆ. ತಾ ೧೬.ರಂದು ಶನಿವಾರ ಜಿಲ್ಲೆಯಾದ್ಯಂತ ಆಯ್ಕೆಯಾದ ತಂಡಗಳ ಕ್ರಿಕೆಟ್ ಪಂದ್ಯಾಟ ನಡೆಯಲಿದ್ದು ೧೭ರಂದು ಬೆಳಿಗ್ಗೆಯಿಂದಲೇ ಮಹಿಳೆಯರಿಗೆ ಯುವಕರಿಗೆ ಮಕ್ಕಳಿಗೆ ಹಿರಿಯರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿದ್ದೇವೆ.. ತಾರೀಕು ೧೭ ಆದಿತ್ಯವಾರದಂದು ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಸಮರೋಪ ಸಮಾರಂಭ ಬಹುಮಾನ ವಿತರಣೆ ನಡೆಯಲಿದೆ. ಎರಡು ದಿನವೂ ಮಧ್ಯಾಹ್ನದ ಊಟದ ವ್ಯವಸ್ಥೆ ಬೆಳಿಗ್ಗೆ ತಿಂಡಿಯ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ. ಎಲ್ಲ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯ ಕುಲಾಲ ಕುಲಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಆ ಮೂಲಕ ಜಿಲ್ಲೆಯದ್ಯಂತ ಕುಲಾಲ ಕುಂಬಾರ ಬಾಂಧವರು ಇನ್ನಷ್ಟು ಸಂಘಟಿತರಾಗೋಣ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕಾಂತಿಮಣಿ ಅವರು ಮಾತನಾಡಿ ಜಿಲ್ಲೆಯ ಕುಲಾಲ ಕುಂಬಾರ ಬಾಂಧವರ ಸಂಘಟನೆಗಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಮಹಿಳಾ ಬಾಂಧವರು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸಬೇಕೆಂದು ಕರೆ ನೀಡಿದರು. ಮಹಿಳೆಯರಿಗೆ ಹಲವು ಕ್ರೀಡೆಗಳು ಆಯೋಜಿಸಿದ್ದು ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಬಾಂಧವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾ ಯುವ ಘಟಕದ ಅಧ್ಯಕ್ಷ ಜೆಪಿ ಕುಲಾಲ್ ಅವರು ಮಾತನಾಡಿ ಯುವಕರಿಗೆ ಕ್ರಿಕೆಟ್ ಪಂದ್ಯಾಟ ಆ ಯೋಜನೆ ಮಾಡಿದ್ದು ಈಗಾಗಲೇ ಜಿಲ್ಲೆಯಾದ್ಯಂತ ಇರುವ ಕುಲಾಲ ಕುಂಬಾರ ಬಾಂಧವರು ತಮ್ಮ ತಂಡವನ್ನು ನೋಂದಾಯಿಸಿಕೊAಡಿದ್ದು ಪ್ರತಿ ತಂಡದಲ್ಲೂ ಅತ್ಯುತ್ತಮ ಆಟಗಾರರಿದ್ದಾರೆ. ಕುಲಾಲ ಕುಂಬಾರ ಬಾಂಧವರಿಗೆ ೧೦ ಹಲವು ಆಟೋಟಗಳನ್ನು ಆಯೋಜನೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಉಪಾಧ್ಯಕ್ಷರಾದ ಎಂ.ಡಿ. ಸುರೇಶ್ ಕುಲಾಲ್, ಜಿಲ್ಲಾ ಘಟಕದ ಪದಾಧಿಕಾರಿಗಳು ಯುವ ಘಟಕದ ಪದಾಧಿಕಾರಿಗಳು ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು, ಕುಲಬಾಂಧವರು ಭಾಗವಹಿಸಿದ್ದರು.