ಚೆಟ್ಟಳ್ಳಿ, ಮೇ ೩: ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಮಾದಕ ವಸ್ತುಗಳ ನಿಯಂತ್ರಣ ಮತ್ತು ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಕೋರಲಾಗಿದ್ದು, ಏSP ಮೂಲಕ ಮಾದಕವಸ್ತು ಸೇವನೆ, ಸಾಗಣೆ ಹಾಗೂ ಅಕ್ರಮ ಕೃಷಿ ಕುರಿತು ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರಕಟಿಸಿರುವ ಮಾಹಿತಿಯಲ್ಲಿ, ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳ ಬಗ್ಗೆ ತಕ್ಷಣವೇ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಗಾಂಜಾ ಸೇರಿದಂತೆ ಇತರ ಮಾದಕ ವಸ್ತುಗಳ ಅಕ್ರಮ ಕೃಷಿ, ಸಾಗಣೆ ಅಥವಾ ಸೇವನೆ ಬಗ್ಗೆ ಮಾಹಿತಿ ಇದ್ದರೆ ಏSP ಮೊಬೈಲ್ ಆ್ಯಪ್ ಮೂಲಕ ಸುಲಭವಾಗಿ ದೂರು ದಾಖಲಿಸಬಹುದಾಗಿದೆ. ದೂರು ನೀಡುವವರ ಹೆಸರು ಹಾಗೂ ವಿವರಗಳನ್ನು ಸಂಪೂರ್ಣ ಗೌಪ್ಯವಾಗಿ ಇಡಲಾಗುತ್ತದೆ ಎಂದು ಪೊಲೀಸ್ ಇಲಾಖೆ ಭರವಸೆ ನೀಡಿದೆ. “ನಿಮ್ಮ ಮಾಹಿತಿ-ನಮ್ಮ ಜವಾಬ್ದಾರಿ” ಎಂಬ ಘೋಷವಾಕ್ಯದಡಿ ಸಾರ್ವಜನಿಕರ ಸಹಕಾರದಿಂದ ಅಪರಾಧಗಳಿಗೆ ಕಡಿವಾಣ ಹಾಕುವ ಪ್ರಯತ್ನ ನಡೆಯುತ್ತಿದೆ. ಮಾದಕ ವಸ್ತುಗಳು ಯುವಜನತೆ ಮತ್ತು ಸಮಾಜದ ಭವಿಷ್ಯಕ್ಕೆ ಅಪಾಯಕಾರಿಯಾಗಿದ್ದು, ಕುಟುಂಬಗಳ ರಕ್ಷಣೆಗಾಗಿ ಪ್ರತಿಯೊಬ್ಬರೂ ಪೊಲೀಸ್ ಇಲಾಖೆಗೆ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ. ಅನುಮಾನಾಸ್ಪದ ಚಟುವಟಿಕೆಗಳು ಕಂಡುಬAದರೆ ತಕ್ಷಣ ೧೧೨ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಸೂಚಿಸಲಾಗಿದೆ. ಸ್ವಚ್ಛ, ಸುರಕ್ಷಿತ ಹಾಗೂ ಮಾದಕ ವಸ್ತು ಮುಕ್ತ ಕೊಡಗು ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ ಎಂದು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಕರೆ ನೀಡಿದೆ.