ವೀರಾಜಪೇಟೆ, ಮೇ. ೫: ವೀರಾಜಪೇಟೆಯ ಆರ್ಜಿ ಗ್ರಾಮದ ಕಲ್ಲುಬಾಣೆಯಲ್ಲಿ ನಡೆಯುತ್ತಿರುವ ಕಲ್ಲುಬಾಣೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟಕ್ಕೆ ಮುಖ್ಯ ಅತಿಥಿಗಳಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗವಹಿಸಿದ್ದರು. ವಲಯ ಕಾಂಗ್ರೆಸ್‌ನ ಜಾಫರ್ ಹಾಗೂ ಸ್ಥಳೀಯ ಪ್ರಮುಖರು, ಕ್ರೀಡಾಕೂಟದ ಆಯೋಜಕರು ಉಪಸ್ಥಿತರಿದ್ದರು. ಈ ಸಂದರ್ಭ ಶಾಸಕರನ್ನು ಸನ್ಮಾನಿಸಲಾಯಿತು.