ಕೂಡಿಗೆ, ಮೇ. ೫: ಪಂಚರಾಜ್ಯಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಮೂರು ರಾಜ್ಯಗಳಲ್ಲಿ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಕೂಡುಮಂಗಳೂರು ಶಕ್ತಿ ಕೇಂದ್ರದ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಪಕ್ಷದ ಕಾರ್ಯಕರ್ತರು ಸೇರಿ ಕೂಡಿಗೆ ಡೈರಿ ಸರ್ಕಲ್ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವದ ಆಚರಣೆ ಮಾಡಿದರು.
ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ದಿನೇಶ್, ಉಪಾಧ್ಯಕ್ಷ ಧರ್ಮ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮನು ನಂಜುAಡ, ಇಂದಿರಾ ರಮೇಶ್, ಕೂಡುಮಂಗಳೂರು ಮಾಜಿ ಶಕ್ತಿ ಕೇಂದ್ರದ ಅಧ್ಯಕ್ಷ ಮಂಜುನಾಥ, ಕೆ. ವರದ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಗಣೇಶ್, ಓ.ಬಿ.ಸಿ ಮಂಡಲ ಕಾರ್ಯದರ್ಶಿ ರವಿ ಪಕ್ಷಿ, ಸಹಕಾರ ಸಂಘದ ನಿರ್ದೇಶಕ ಎಸ್.ಎಸ್ ಕೃಷ್ಣ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಇಂದಿರಾ ರಮೇಶ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್, ಪಕ್ಷದ ಪ್ರಮುಖರಾದ ಕೇಶವ ರೈ, ಎಂ.ಬಿ ಮಹೇಶ್, ಲೋಕೇಶ್, ಸುಬ್ಬಯ್ಯ, ಯೋಗೇಶ್, ರಾಜು, ಲೋಹಿತ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಚಂದ್ರು ಮಾಡ್ಲಿಗೌಡ, ಮಂಜುನಾಥ, ಮಣಿಕಂಠ, ಪದ್ಮ, ಕನಕ, ಅನಿತಾ ಇತರ ಕಾರ್ಯಕರ್ತರು ಹಾಜರಿದ್ದರು.