ವೀರಾಜಪೇಟೆ, ಮೇ ೫: ವೀರಾಜಪೇಟೆ ತಾಲೂಕು ಕಡಂಗಮರೂರು ಗ್ರಾಮಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೇಟಿ ನೀಡಿದರು.
ಇಲ್ಲಿಯ ಪ್ರಸಿದ್ಧ ಶ್ರೀ ಭದ್ರಕಾಳಿ ಹಾಗೂ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಆಗಮಿಸಿದ ಶಾಸಕರು, ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
ಬಳಿಕ ದೇವಸ್ಥಾನಕ್ಕೆ ತೆರಳುವ ನೂತನ ರಸ್ತೆಯನ್ನು ಲೋಕಾರ್ಪಣೆ ಮಾಡಿದರು.
ಶ್ರೀ ದೇವರ ಸನ್ನಿಧಿಯಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಇದನ್ನು ಮನಗಂಡ ಶಾಸಕರು, ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ತಮ್ಮ ಅನುದಾನದ ರೂ. ೩ ಲಕ್ಷದಲ್ಲಿ ರಸ್ತೆಯನ್ನು ನಿರ್ಮಿಸಿ ಕೊಟ್ಟಿದ್ದು, ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು. ಬಳಿಕ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕರು ದೇವರ ಕಾರ್ಯದಲ್ಲಿ ತಮ್ಮನ್ನು ಕೆಲಕಾಲ ತೊಡಿಸಿಕೊಂಡರು.
ಈ ಸಂದರ್ಭದಲ್ಲಿ ತಕ್ಕ ಮುಖ್ಯಸ್ಥರು, ಪಕ್ಷದ ಮುಖಂಡರು ಮಂಡೇಟಿರ ಅನಿಲ್, ಮಂಡೇಪAಡ ರೋಷನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.