ವೀರಾಜಪೇಟೆ, ಮೇ.೫: ಪಂಚರಾಜ್ಯಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಮೂರು ರಾಜ್ಯಗಳಲ್ಲಿ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಬಿಟ್ಟಂಗಾಲದ ಬಿಜೆಪಿ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಪಕ್ಷದ ಕಾರ್ಯಕರ್ತರು ಸೇರಿ ಬಿಟ್ಟಂಗಾಲ ಸರ್ಕಲ್ನಲ್ಲಿ ಜಮಾಯಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ಅಪ್ಪನೆರವಂಡ ದಿನೇಶ್, ರೈತ ಮೋರ್ಚಾ ಘಟಕದ ಅಧ್ಯಕ್ಷ ಅಮ್ಮುಣಿಚಂಡ ರಂಜು ಪೂಣಚ್ಚ, ಹಿಂದೂ ಸಂಗಮ ಆಯೋಜನಾ ಸಮಿತಿ ಅಧ್ಯಕ್ಷ ಕುಪ್ಪಂಡ ಮನು, ಬಿಟ್ಟಂಗಾಲದ ಹಿಂದೂ ಸಂಗಮ ಸಮಿತಿ ಸದಸ್ಯ ಬಿ.ಎನ್. ಯೋಗೇಶ್, ಬಿಟ್ಟಂಗಾಲ ಮಂಡಲದ ಕಾರ್ಯದರ್ಶಿ ಜಗದೀಶ್, ಪ್ರಮುಖರಾದ ಗಣೇಶ್ ಗೌಡ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.