*ಗೋಣಿಕೊಪ್ಪ, ಮೇ.೫: ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ, ದಾವಣಗೆರೆ ದಕ್ಷಿಣದಲ್ಲಿ ನಡೆದ ಉಪಚುನಾವಣೆಯಲ್ಲಿ ಸಮರ್ಥ ಶ್ಯಾಮನೂರು ಗೆಲುವಿನ ಫಲಿತಾಂಶ ಬಂದ ಹಿನ್ನೆಲೆ ಗೋಣಿಕೊಪ್ಪ ನಗರ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು.

ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ನೇತೃತ್ವದಲ್ಲಿ ನಗರದ ಪ್ರಮುಖರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ ಘೋಷಣೆಗಳನ್ನು ಹಾಕುವ ಮೂಲಕ ಸಂಭ್ರಮಿಸಿದರು.

ಕಾAಗ್ರೆಸ್ಸಿನ ಪಿ.ಕೆ ಪ್ರವೀಣ್ ಮತ್ತು ಕೆಡಿಸಿಸಿ ಸದಸ್ಯ ಸಮ್ಮದ್ ಕಾಂಗ್ರೆಸ್ ಪಕ್ಷದ ಗೆಲುವಿನ ಹಾದಿಯ ಬಗ್ಗೆ ಮಾತನಾಡಿದರು.

ಕಾಂಗ್ರೆಸ್ಸಿನ ಹಿರಿಯ ಮುಖಂಡ ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುಳ ಎಂ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಸದಸ್ಯ ಖಾಲೀದ್, ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಂಕಿತ್, ಪ್ರಮುಖರಾದ ರಾಜಶೇಖರ್, ನಾರಾಯಣಸ್ವಾಮಿ ನಾಯ್ಡು, ಧನಲಕ್ಷಿö್ಮ ಇದ್ದರು.