ಚೆಯ್ಯಂಡಾಣೆ, ಮೇ. ೫: ಸ್ಥಳೀಯ ಕೊಕೇರಿ ಗ್ರಾಮದ ಕಿಕ್ಕರೆಯ ಕೆ.ಯು ಅಬ್ದುಲ್ ಸಮದ್ ಅವರು ೩೩ ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಏ.೩೦ ರಂದು ಸೇವೆಯಿಂದ ವಯೋ ನಿವೃತ್ತಿ ಹೊಂದಿದರು.

ಅವರ ದೀರ್ಘಕಾಲದ ಸೇವೆಯನ್ನು ಪರಿಗಣಿಸಿ ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಿ ಬೀಳ್ಕೊಡಲಾಯಿತು.