ನಾಪೋಕ್ಲು, ಮೇ ೫: ಆಟೋ ಚಾಲಕರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾದ ಘಟನೆ ಸೋಮವಾರ ಸಂಜೆ ಬೇತು ಗ್ರಾಮದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಆಟೋಚಾಲಕ ಝಕರಿಯ ತೀವ್ರ ರಕ್ತಸ್ರಾವದಿಂದ ಚರಂಡಿಯಲ್ಲಿ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಹಾಗೂ ಪೊಲೀಸರು ಆತನಿಗೆ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಬಳಿಕ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಆಸ್ತಿ ವೈಷಮ್ಯದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ ಎನ್ನಲಾಗಿದ್ದು ಇಲ್ಲಿನ ಯುವಕರ ತಂಡ ಅಪಹರಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ ಎಂಬ ಆರೋಪ ವ್ಯಕ್ತವಾಗಿದೆ. ಸ್ಥಳೀಯ ಠಾಣಾಧಿಕಾರಿ ರಾಘವೇಂದ್ರ ಬಿ.ಜಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಝಕರಿಯ ಹೇಳಿಕೆಯನ್ನು ಪಡೆದುಕೊಂಡು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.