ಮಡಿಕೇರಿ, ಮೇ ೫: ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಮೂಲಕ ೫.೫೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಅನ್ನು ೧೯ನೇ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಕಮಾಂಡಿAಗ್ ಆಫೀಸರ್ ಕರ್ನಲ್ ರೆಜಿತ್ ಮುಕುಂದನ್ ಮತ್ತು ಕೊಡಗು ವಿ.ವಿ ಉಪ ಕುಲಪತಿ ಫ್ರೋ.ಅಶೋಕ್ ಸಂಗಪ್ಪ ಆಲೂರ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಕರ್ನಲ್ ರೆಜಿತ್ ಮುಕುಂದನ್ ಮಡಿಕೇರಿ ಸುತ್ತಮುತ್ತಲಿನ ಪ್ರದೇಶದಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ ಫೈರಿಂಗ್ ರೇಂಜ್ ಇಲ್ಲದಾಗಿತ್ತು. ೧೯ನೇ ಕರ್ನಾಟಕ ಎನ್‌ಸಿಸಿ ಬೆಟಾಲಿಯನ್‌ಗೆ ಈ ರೈಫಲ್ ಫೈರಿಂಗ್ ರೇಂಜ್ ಅಮೂಲ್ಯವಾಗಿದ್ದು, ಕೆಡೆಟ್‌ಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಫೈರಿಂಗ್ ರೇಂಜ್‌ನ ಅಗತ್ಯತೆಯನ್ನು ಮನಗಂಡು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಕಾಲೇಜು ಮೈದಾನದ ಪಕ್ಕದಲ್ಲೇ ಎನ್‌ಸಿಸಿಗೆ ಕೊಡುಗೆಯಾಗಿ ನೀಡಿರುವುದಕ್ಕೆ ಕರ್ನಲ್ ರೆಜಿತ್ ಮುಕುಂದನ್ ಶ್ಲಾಘನೆ ವ್ಯಕ್ತಪಡಿಸಿದರು.

ಸಭಾ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದ ಕೊಡಗು ವಿ.ವಿ ಉಪ ಕುಲಪತಿ ಪ್ರೋ.ಅಶೋಕ್ ಸಂಗಪ್ಪ ಆಲೂರ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಕಾಲೇಜಿಗೆ ಹತ್ತಾರು ಕೊಡುಗೆಗಳನ್ನು ನೀಡಿದೆ. ಇದೇ ರೀತಿಯ ಸಹಕಾರ ಮುಂದೆಯೂ ಇರಲಿ. ಬಂದೂಕಿನಿAದ ಹಾರಿದ ಗುಂಡು ಯಾವ ರೀತಿ ತನ್ನ ಗುರಿಯನ್ನು ತಲುಪುತ್ತದೆಯೋ ಅದೇ ರೀತಿಯಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳು ತಮ್ಮ ಬದುಕಿನ ಗುರಿಯನ್ನೂ ಹೊಂದಬೇಕು ಎಂದು ಅವರು ಸಲಹೆ ನೀಡಿದರು. ಎನ್‌ಸಿಸಿ ಕೆಡೆಟ್‌ಗಳಾಗಿ ಶಿಸ್ತು ಮತ್ತು ದೇಶ ಭಕ್ತಿಯನ್ನೂ ಮೈಗೂಡಿಸಿಕೊಳ್ಳಲು ಸಾಧ್ಯವಿದೆ. ಹೀಗಾಗಿ ಎಲ್ಲಾ ವಿದ್ಯಾರ್ಥಿಗಳು ಎನ್‌ಸಿಸಿ ಸೇರ್ಪಡೆಯಾಗಬೇಕು ಎಂದರು.

ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಮುಕ್ಕಾಟಿರ ಎ.ಅಪ್ಪಯ್ಯ, ವಿದ್ಯಾರ್ಥಿ ಜೀವನದಲ್ಲಿ ತಾವು ಎನ್‌ಸಿಸಿ ಮೂಲಕ ಪಡೆದ ತರಬೇತಿ, ವಿವಿಧ ಕ್ಯಾಂಪ್‌ಗಳಲ್ಲಿ ಪಡೆದ ಅನುಭವಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರುವಿದ್ಯಾರ್ಥಿ ಜೀವನದಲ್ಲಿಯೇ ಭವಿಷ್ಯದ ಬಗ್ಗೆ ನಿಖರ ಗುರಿ ಹೊಂದಬೇಕೆAದು ಸಲಹೆ ನೀಡಿದರು. ಈ ಹಿಂದೆ ಜಿಲ್ಲೆಯಲ್ಲಿದ್ದ ಫೈರಿಂಗ್ ರೇಂಜ್‌ಗಳು ಪ್ರಸ್ತುತ ಒತ್ತುವರಿಗೆ ತುತ್ತಾಗಿರುವ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿದರು.

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜ್ಜಿರ ಅಯ್ಯಪ್ಪ ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಭಾರತೀಯ ಸೇನೆ ಸೇರಿದಂತೆ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಶ್ರೀಲಂಕಾದಲ್ಲಿ ನಡೆದಿದ್ದ ಕಾರ್ಯಾಚರಣೆಯಲ್ಲಿ ಇದೇ ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಕಾಲೇಜಿನ ಮಾಜಿ ವಿದ್ಯಾರ್ಥಿ, ಸೇನಾಧಿಕಾರಿ ಪುಟ್ಟಿಚಂಡ ಎಸ್.ಗಣಪತಿ ಅವರು ಮೊದಲ ಮಹಾ ವೀರ ಚಕ್ರ ಪ್ರಶಸ್ತಿಗೂ ಪಾತ್ರರಾಗಿದ್ದಾರೆ. ಇಂತಹ ಹತ್ತಾರು ಅಮೂಲ್ಯ ಸೇನಾಧಿಕಾರಿಗಳ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ದೇಶಕ್ಕೆ ಕೊಡುಗೆಯಾಗಿ ನೀಡಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೋ. ಬಿ.ರಾಘವ ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಕಾಲೇಜಿಗೆ ಬೆನ್ನೆಲುಬಾಗಿ ನಿಂತಿದೆ. ಸಂಘದ ಸಹಕಾರದಿಂದ ಕಾಲೇಜಿನಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡಲಾಗಿದೆ. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಎಲ್ಲಾ ಮಾಜಿ ವಿದ್ಯಾರ್ಥಿಗಳು ಹಳೇ ವಿದ್ಯಾರ್ಥಿ ಸಂಘದ ಸದಸ್ಯತ್ವವನ್ನು ಪಡೆಯುವ ಮೂಲಕ ಸಂಘವನ್ನು ಮತ್ತಷ್ಟು ಬಲಪಡಿಸಬೇಕು. ಇದರಿಂದ ಕಾಲೇಜಿನ ಭವಿಷ್ಯಕ್ಕೂ ಸಹಕಾರಿಯಾಗಲಿದೆ ಎಂದರು.

ಕಾಲೇಜಿನ ಮಾಜಿ ವಿದ್ಯಾರ್ಥಿ, ವಕೀಲರಾದ ಮುಂಡAಡ ಸುದೈಯ್ ನಾಣಯ್ಯ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಶೂಟಿಂಗ್ ಕ್ರೀಡೆಯೂ ಮುನ್ನಲೆಯಲ್ಲಿದೆ. ಇದೀಗ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಮೂಲಕ ನಿರ್ಮಿಸಲಾಗಿರುವ ಫೈರಿಂಗ್ ರೇಂಜ್‌ನಲ್ಲಿ ರಾಜ್ಯ ರಾಷ್ಟç ಮಟ್ಟದ ಶೂಟಿಂಗ್ ಕ್ರೀಡೆಗಳಿಗೆ ತರಬೇತಿಯನ್ನು ನೀಡಬಹುದಾಗಿದೆ. ಆ ನಿಟ್ಟಿನಲ್ಲಿ ಚಿಂತಿಸಿದಲ್ಲಿ ಶೂಟಿಂಗ್ ಕ್ರೀಡಾಪಟುಗಳಿಗೂ ಕೂಡ ಅನುಕೂಲವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸನ್ಮಾನ

ಕಾರ್ಯಕ್ರಮದಲ್ಲಿ ೧೯ನೇ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಕಮಾಂಡಿAಗ್ ಆಫೀಸರ್ ಕರ್ನಲ್ ರೆಜಿತ್ ಮುಕುಂದನ್, ಕೊಡಗು ವಿ.ವಿ ಉಪ ಕುಲಪತಿ ಫ್ರೋ.ಅಶೋಕ್ ಸಂಗಪ್ಪ ಆಲೂರ, ಪ್ರಾಂಶುಪಾಲರಾದ ಮೇಜರ್ ಪ್ರೊ. ಬಿ.ರಾಘವ, ನಿವೃತ್ತ ಎಸ್.ಪಿ. ಮುಕ್ಕಾಟಿರ ಎ.ಅಪ್ಪಯ್ಯ, ವಕೀಲರಾದ ಮುಂಡAಡ ಸುದೈಯ್ ನಾಣಯ್ಯ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ರೈಫಲ್ ರೇಂಜ್ ಗುತ್ತಿಗೆದಾರ ಪರಮೇಶ್, ಎನ್‌ಸಿಸಿ ಅಧಿಕಾರಿಗಳು ಮತ್ತು ಸೇನಾ ಸಿಬ್ಬಂದಿಗಳನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಮೂಲಕ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಹಳೇ ವಿದ್ಯಾರ್ಥಿ ಸಂಘದ ಪ್ರಮುಖರಾದ ಬೊಟ್ಟಂಗಡ ಗಣಪತಿ, ಶ್ಯಾಮ್, ಪತ್ರಕರ್ತ ಚಂದನ್ ನಂದರಬೆಟ್ಟು, ಸಾಹಿತಿ ರಶ್ಮಿ ಮೇದಪ್ಪ, ಉದ್ಯಮಿ ದಮಯಂತಿ, ಕಾಲೇಜಿನ ಉಪನ್ಯಾಸಕರಾದ ರವಿಶಂಕರ್, ಕೃಷ್ಣ, ಕಾಲೇಜು ಸಿಬ್ಬಂದಿ, ಎನ್‌ಸಿಸಿ ಕೆಡೆಟ್‌ಗಳು ಹಾಜರಿದ್ದರು.