ಕುಶಾಲನಗರ, ಮೇ ೬: ಜಿಲ್ಲೆಗೆ ಆಗಮಿಸಿದ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟಿçÃಯ ಅಧ್ಯಕ್ಷರೂ ಆಗಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ವತಿಯಿಂದ ಕೊಡಗಿನ ಪ್ರವೇಶ ದ್ವಾರ ಕುಶಾಲನಗರದ ಕಾವೇರಿ ನದಿ ದಂಡೆಯ ಕಾವೇರಿ ಪ್ರತಿಮೆ ಬಳಿ ಸ್ವಾಗತಿಸಲಾಯಿತು. ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕನಾಗಿ ಬಸವಣ್ಣನವರನ್ನು ಘೋಷಿಸಿದೆ. ಆದರೆ ಇದುವರೆಗೂ ಜಿಲ್ಲಾ ಕೇಂದ್ರದಲಿ ಬಸವ ಭವನ ನಿರ್ಮಾಣ ಮಾಡುವ ಸಂಬAಧ ಕ್ರಮಕೈಗೊಂಡಿಲ್ಲ. ಮಡಿಕೇರಿಯಲ್ಲಿರುವ ರಾಜರ ಗದ್ದುಗೆ, ಕೋಟೆ ಅರಮನೆಗಳ ಸಂರಕ್ಷಣೆಗೆ ವಿಶೇಷ ಒತ್ತು ನೀಡಬೇಕೆಂದು ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಶಾಂಭಶಿವಯ್ಯ, ಉಪಾಧ್ಯಕ್ಷ ಎಚ್.ಪಿ. ಉದಯ ಕುಮಾರ್, ಕುಶಾಲನಗರ ತಾಲೂಕು ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ಎಂ. ಮಧುಸೂಧನ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ಮೂರ್ತಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಹಕ್ಕೆ ಮೋಹನ್, ಪ್ರಧಾನ ಕಾರ್ಯದರ್ಶಿ ಬಿ. ನಟರಾಜು, ಪ್ರಮುಖರಾದ ಕೆ.ಪಿ. ಪರಮೇಶ್, ಎಂ. ಎಸ್. ಗಣೇಶ್, ಎಂ. ಎಸ್. ಲೋಕೇಶ್, ಟಿ.ಜಿ. ಪ್ರೇಮ್ ಕುಮಾರ್, ಎಪಿಸಿಎಂಎಸ್ ಅಧ್ಯಕ್ಷ ಹೆಚ್.ಬಿ. ಚಂದ್ರಪ್ಪ, ತೊರೆನೂರು ಸಹಕಾರ ಸಂಘದ ಅಧ್ಯಕ್ಷರಾದ ಟಿ. ಬಿ.ಜಗದೀಶ್, ಶಿವಲಿಂಗಪ್ಪ, ಬಿ.ಬಿ. ಲೋಕೇಶ್ ಸೇರಿದಂತೆ ಇನ್ನಿತರರು ಇದ್ದರು.