ಸೋಮವಾರಪೇಟೆ, ಮೇ ೭: ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಇದೇ ಪ್ರಥಮ ಬಾರಿಗೆ ಸೋಮವಾರಪೇಟೆಯ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಆಯೋಜಿಸಿರುವ ಆಹ್ವಾನಿತ ಪ್ರತಿಷ್ಠಿತ ತಂಡಗಳ ನಡುವಿನ ಯಿಫಾ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯಾಟಕ್ಕೆ ಇಂದು ವಿಧ್ಯುಕ್ತ ಚಾಲನೆ ನೀಡಲಾಯಿತು.
೧೮ ವರ್ಷಗಳ ನಂತರ ಈ ಭಾಗದಲ್ಲಿ ಆಯೋಜಿತವಾಗಿರುವ ರಾಜ್ಯಮಟ್ಟದ ಪ್ರತಿಷ್ಠಿತ ತಂಡಗಳ ನಡುವಿನ ಲೀಗ್ ಮಾದರಿಯ ಪಂದ್ಯಾಟಕ್ಕೆ ಇಂಡಿಯನ್ ಹಾಕಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಆರ್.ಕೆ. ಶೆಟ್ಟಿ ಅವರು ಚಾಲನೆ ನೀಡಿ ಪಂದ್ಯಾವಳಿಗೆ ಶುಭ ಹಾರೈಸಿದರು.
ಸಮಾರಂಭದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಕ್ರೀಡಾ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ದೇಶದ ಹಾಕಿ ಕ್ಷೇತ್ರಕ್ಕೆ ಕೊಡಗಿನ ಹಾಕಿಪಟುಗಳ ಕೊಡುಗೆ ಅಪಾರವಾಗಿದೆ. ಯಂಗ್ ಇಂಡಿಯನ್ ಫಾಮರ‍್ಸ್ ಅಸೋಸಿಯೇಷನ್‌ನಿಂದ ಈ ಬಾರಿ ಅಂತರರಾಷ್ಟಿçÃಯ ಮಾದರಿಯಲ್ಲಿ ಹಾಕಿ ಪಂದ್ಯಾಟವನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು.
ಸೋಮವಾರಪೇಟೆಯ ಮೈದಾನವನ್ನು ಅಂತರರಾಷ್ಟಿçÃಯ ಮಟ್ಟದ ಮೈದಾನದಂತೆ ನಿರ್ಮಾಣ ಮಾಡಲಾಗಿದೆ. ಈ ಭಾಗದ ಹಾಕಿಪಟುಗಳ ಬೇಡಿಕೆಯನ್ನು ಈಡೇರಿಸಿದ ತೃಪ್ತಿಯಿದೆ. ಭಾರತ ಹಾಕಿ ಕ್ಷೇತ್ರಕ್ಕೆ ಸೋಮವಾರಪೇಟೆಯ ಹಲವಷ್ಟು ಆಟಗಾರರು ಕೊಡುಗೆ ನೀಡಿದ್ದಾರೆ. ಇದೇ ಮೈದಾನದಲ್ಲಿ ಆಟವಾಡಿದ ಗೋವಿಂದ, ಗಣೇಶ್, ಅರ್ಜುನ್ ಹಾಲಪ್ಪರಂತಹ ಆಟಗಾರರು ಭಾರತ ದೇಶದ ಹಾಕಿ ತಂಡದ ನಾಯಕರಾಗಿ ಜವಾಬ್ದಾರಿ ನಿರ್ವಹಿಸಿರುವುದು ಎಲ್ಲರಿಗೂ ಹೆಮ್ಮೆ ಎಂದರು. ಯುವ ಜನಾಂಗ ಕ್ರೀಡಾ ಕ್ಷೇತ್ರದತ್ತ ಆಸಕ್ತಿ ಬೆಳೆಸಿಕೊಳ್ಳಬೇಕು. ಮಕ್ಕಳಿಗೆ ಎಳೆಯ ವಯಸ್ಸಿನಿಂದಲೇ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಯಿಫಾ ಸಂಘಟನೆಯಿAದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ಆಯೋಜನೆ ಮಾಡುವ ಮೂಲಕ ಹಾಕಿಗೆ ಪ್ರೋತ್ಸಾಹ ತುಂಬುವ ಕಾರ್ಯ ಶ್ಲಾಘನೀಯ ಎಂದು ಅಭಿಪ್ರಾಯಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಯಂಗ್ ಇಂಡಿಯನ್ ಫಾಮರ‍್ಸ್ ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಮಾತನಾಡಿ, ಸಮಾಜ ಸೇವಾ ಕಾರ್ಯಗಳಿಗಾಗಿ ಯಿಫಾ ಸಂಘಟನೆಯನ್ನು ಹುಟ್ಟುಹಾಕಲಾಗಿದ್ದು, ೨೦೧೮ರ ಜಲಪ್ರಳಯ, ನಂತರದ ಕೋವಿಡ್ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಹೆಚ್ಚು ಸಮಾಜಮುಖಿ ಕಾರ್ಯ ಮಾಡಲಾಗಿದೆ. ಕೊಡಗಿನಲ್ಲಿ ಹಾಕಿ ಕ್ರೀಡೆಗೂ ಹೆಚ್ಚು ಪ್ರೋತ್ಸಾಹ ತುಂಬುವ ನಿಟ್ಟಿನಲ್ಲಿ ಇದೇ ಪ್ರಥಮ ಬಾರಿಗೆ ರಾಜ್ಯಮಟ್ಟದ ಪಂದ್ಯಾವಳಿ ಆಯೋಜಿಸಲಾಗಿದೆ ಎಂದರು.
ಲೀಗ್ ಮಾದರಿಯ ಪಂದ್ಯಾವಳಿ ಇದಾಗಿದ್ದು, ತಾ. ೧೦ ರಂದು ಮಧ್ಯಾಹ್ನ ೩ ಗಂಟೆಗೆ ಫೈನಲ್ ಪಂದ್ಯ ನಡೆಯಲಿದೆ. ಪಂದ್ಯಾಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡಕ್ಕೆ ರೂ. ೨ ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ರೂ. ೧ ಲಕ್ಷ ನಗದು ಹಾಗೂ ಟ್ರೋಫಿ, ತೃತೀಯ ಸ್ಥಾನ ಪಡೆಯುವ ತಂಡಕ್ಕೆ ರೂ. ೫೦ ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುವುದು. ಇದರೊಂದಿಗೆ ವೈಯಕ್ತಿಕ ವಿಭಾಗದಲ್ಲಿಯೂ ಪ್ರಶಸ್ತಿಗಳನ್ನು ವಿತರಿಸಲಾಗುವುದು ಎಂದರು.
ವೇದಿಕೆಯಲ್ಲಿ ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ಚಕ್ರವರ್ತಿ, ಕೂಡಿಗೆ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಕ್ರೀಡಾ ಶಾಲೆಯ ತರಬೇತುದಾರ ವೆಂಕಟೇಶ್, ಹಾಕಿ ಕೂರ್ಗ್ ಅಧ್ಯಕ್ಷ ಲವ, ಕಾರ್ಯದರ್ಶಿ ಚೇತನ್, ಹಿರಿಯ ಹಾಕಿ ಆಟಗಾರರಾದ ಲಕ್ಷಿö್ಮÃಕಾಂತ್, ಹಾಲಪ್ಪ, ಡಾಲ್ಫೀನ್ಸ್ ಸ್ಫೋರ್ಟ್ಸ್ ಕ್ಲಬ್ ಅಧ್ಯಕ್ಷ ಬಿ.ಆರ್. ಮಹೇಶ್, ಬ್ಲೂ ಸ್ಟಾರ್ ಹಾಕಿ ಸಂಸ್ಥೆಯ ಕಾರ್ಯದರ್ಶಿ ಅರುಣ್‌ಕುಮಾರ್ ಅವರುಗಳು ಇದ್ದರು.
ಕ್ರೀಡಾಕೂಟದಲ್ಲಿ ಕೆನರಾ ಬ್ಯಾಂಕ್, ಕರ್ನಾಟಕ ಸ್ಟೇಟ್ ಪೊಲೀಸ್, ಎಜಿಓಆರ್.ಸಿ., ಸೌತ್ ವೆಸ್ಟರ್ನ್ ರೈಲ್ವೇಸ್, ಕಸ್ಟಮ್ಸ್, ಡಿವೈಇಎಸ್, ಸೌತರ್ನ್ ಕಮಾಂಡ್ ಹಾಗೂ ಆತಿಥೇಯ ಯಿಫಾ ತಂಡಗಳು ಭಾಗವಹಿಸಿದ್ದು, ಅಂತರರಾಷ್ಟಿçÃಯ ಮಟ್ಟದಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿರುವ, ಪ್ರಸ್ತುತ ಪ್ರತಿನಿಧಿಸುತ್ತಿರುವ ಆಟಗಾರರು ಪ್ರಮುಖ ಆಕರ್ಷಣೆಯಾಗಿದ್ದಾರೆ. ಇದರೊಂದಿಗೆ ಜೂನಿಯರ್ ಇಂಡಿಯಾ ಕ್ಯಾಂಪ್‌ನಲ್ಲಿರುವ ಸೋಮವಾರಪೇಟೆಯ ಆಟಗಾರರೂ ಸಹ ಮೈದಾನದಲ್ಲಿದ್ದು, ಸ್ಥಳೀಯ ಹಾಕಿಪ್ರೇಮಿಗಳ ಪ್ರೋತ್ಸಾಹ ಹೆಚ್ಚಾಗಿ ಕಂಡುಬರುತ್ತಿದೆ.