ಮಡಿಕೇರಿ, ಮೇ ೯: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ೨೦೨೫ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ” ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು/ ಮುದ್ರಕರು/ ಕಲಾವಿದರು ಅರ್ಜಿ ಸಲ್ಲಿಸ ಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ ಚಿತ್ರ ಕಲಾವಿದರ ಪೂರ್ಣ ವಿಳಾಸ/ ದೂರವಾಣಿ ಸಂಖ್ಯೆ - ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಅರ್ಜಿ ನಮೂನೆಯೊಂದಿಗೆ ತಾ. ೧೧ ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ : ಈ ವಿಳಾಸಕ್ಕೆ ಕಳುಹಿಸಿ ಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸ ಲಾಗುವುದಿಲ್ಲ. ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ. ಅರ್ಜಿ ನಮೂನೆಯನ್ನು ವೆಬ್‌ಸೈಟ್ hಣಣಠಿs://ಞಠಿಠಿ.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨, ದೂರವಾಣಿ ಸಂ ೨೨೧೦೭೭೦೪ / ೨೨೪೮೪೫೧೬ ಇಲ್ಲಿ ಸಂಪರ್ಕಿಸ ಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.