ಗೋಣಿಕೊಪ್ಪಲು, ಮೇ ೯: ವೀರಾಜಪೇಟೆ, ಪೊನ್ನಂಪೇಟೆ ತಾಲೂಕು ವೀರ ಮಡಿವಾಳ ಮಾಚೀದೇವರ ಸಂಘದಿAದ ಗೋಣಿಕೊಪ್ಪಲುವಿನ ಪ್ರಾಥಮಿಕ ಶಾಲಾ ಮೈದಾನದಲ್ಲಿ ಲೀಗ್ ಮಾದರಿಯಲ್ಲಿ ಆಯೋಜನೆಗೊಂಡ ೨ ದಿನಗಳ ಕ್ರಿಕೆಟ್ ಪಂದ್ಯಾವಳಿಗೆ ವಿಧ್ಯುಕ್ತ ಚಾಲನೆ ನೀಡಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ್ ಕಾಮತ್ ಮಾತನಾಡಿ, ಸಮಾಜದ ಒಗ್ಗಟ್ಟು ಮತ್ತಷ್ಟು ಗಟ್ಟಿಯಾಗಲಿ, ಸಮಾಜದ ಬಾಂಧವರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡುವಂತಾಗಲಿ, ವಾರ್ಷಿಕವಾಗಿ ಸಮುದಾಯ ಬಾಂಧವರು ಒಂದೆಡೆ ಸೇರುವುದರಿಂದ ಸಮಾಜದ ಒಗ್ಗಟ್ಟು ವೃದ್ಧಿಯಾಗಲು ಸಹಕಾರಿಯಾಗಲಿದೆ ಎಂದರು.
ಶ್ರೀ ವೀರಮಡಿವಾಳ ಮಾಚೀದೇವರ ಸಂಘದ ಜಿಲ್ಲಾಧ್ಯಕ್ಷ ಡಿ.ಪಿ. ರಾಜೇಶ್ ಪದ್ಮನಾಭ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಕ್ರೀಡೋತ್ಸವವನ್ನು ನಡೆಸಲು ನಾನಾ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ಇದೀಗ ಸಮಾಜ ಬಾಂಧವರು ಕೊಂಚಮಟ್ಟಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುಂದೆ ಬಂದಿದ್ದಾರೆ. ಸಮುದಾಯ ಬಾಂಧವರ, ದಾನಿಗಳ ಸಹಕಾರದಿಂದ ಕ್ರೀಡೋತ್ಸವವನ್ನು ಆಯೋಜಿಸಲು ಉತ್ಸಾಹಿ ಯುವಕರು ಆಸಕ್ತಿ ತೋರಿದ ಹಿನ್ನೆಲೆಯಲ್ಲಿ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ ಎಂದರು. ಗೋಣಿಕೊಪ್ಪ ಗ್ರಾ.ಪಂ. ಮಾಜಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಬ್ಯಾಟಿಂಗ್ ಮಾಡುವ ಮೂಲಕ ೩ನೇ ವರ್ಷದ ಮಡಿವಾಳ ಕ್ರಿಕೆಟ್ ಕಪ್‌ಗೆ ಚಾಲನೆ ನೀಡಿದರು. ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ವೇದಿಕೆಯಲ್ಲಿ ಮಡಿವಾಳ ಸಮಾಜದ ರಾಜ್ಯಾಧ್ಯಕ್ಷ ಸಿ. ನಂಜಪ್ಪ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಿ.ಎನ್. ಪ್ರಕಾಶ್ ಉಪಸ್ಥಿತರಿದ್ದರು.
ಕ್ರಿಕೆಟ್ ಪಂದ್ಯಾವಳಿ ಸೇರಿದಂತೆ ವಿವಿಧ ಕ್ರೀಡೋತ್ಸವ ಜರುಗಿತು. ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಕ್ರೀಡೆಗಳು ನಡೆದವು. ಸಭೆಯ ಆರಂಭದಲ್ಲಿ ಸ್ವಾಗತ ನೃತ್ಯವನ್ನು ಪ್ರದರ್ಶನ ಮಾಡುವ ಮೂಲಕ ವಿದ್ಯಾರ್ಥಿಗಳು ಗಮನ ಸೆಳೆದರು. ಕಾರ್ಯಕ್ರಮದ ಅಂಗವಾಗಿ ಜನಾಂಗದ ಹಿರಿಯ ಸಾಧಕರಿಗೆ, ನಿವೃತ್ತ ಸೈನಿಕರಿಗೆ ಕಲೆ, ಸಾಹಿತ್ಯ, ಕ್ರೀಡೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮಡಿವಾಳ ಸಂಘದ ಉಪಾಧ್ಯಕ್ಷರುಗಳಾದ ಗಿರಿಜ ಪ್ರೇಮ, ಡಿ.ಜೆ. ಕೇಶವ, ಸಹಕಾರ್ಯದರ್ಶಿ ಎಂ.ಕೆ. ಗಣೇಶ್, ಎಂ.ಬಿ. ಅಭಿಷೇಕ್, ಖಜಾಂಚಿ ವನಿತ ವಸಂತ್, ಕ್ರೀಡಾ ಸಂಚಾಲಕ ವಿನು, ರತನ್, ಶ್ರೀಜಿತ್, ಎಸ್.ಜೆ. ಪ್ರಸಾದ್, ಎಂ.ಸಿ. ಗಣೇಶ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು. ಸಮಾಜದ ಪದಾಧಿಕಾರಿಗಳಾದ ಎಂ.ಕೆ. ರವಿಕುಮಾರ್ ಸ್ವಾಗತಿಸಿ, ವೃಂದ ಪ್ರಾರ್ಥಿಸಿ, ಶ್ವೇತ ಕಾಂತರಾಜ್ ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ಎಂ.ಆರ್. ಮಹಾದೇವ ವಂದಿಸಿದರು.