ಮಡಿಕೇರಿ, ಮೇ ೧೧: ೨೦೨೫-೨೬ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ತಾ. ೧೬ ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: hಣಣಠಿs://ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ/, ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು.
ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ:೮೦೫೦೭೭೦೦೦೪, ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇ-ಮೇಲ್: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ, ದೂರವಾಣಿ ಸಂಖ್ಯೆ: ೦೮೨೭೨-೨೯೫೬೨೮ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.