ವೀರಾಜಪೇಟೆ, ಮೇ ೧೩: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ತೋರದಂತಹ ಗಡಿ ಗ್ರಾಮದಲ್ಲಿ ಗಡಿನಾಡ ಉತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದು ವಿಶೇಷವೇ ಸರಿ. ಇದರಿಂದ ಅರೆಭಾಷೆ, ಸಂಸ್ಕೃತಿ, ಸಾಹಿತ್ಯ, ಕಲೆಗಳನ್ನು ಉಳಿಸಿ, ಬೆಳೆಸಲು ಸಹಕಾರಿಯಾಗಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ವೀರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮದ ಅರೆಭಾಷೆ, ಸಂಸ್ಕೃತಿ ಮತ್ತು ಅಭಿವೃದ್ಧಿ ಸಂಘದ ಸಹಕಾರದಲ್ಲಿ ತೋರ ಸಮುದಾಯ ಭವನದ ಆವರಣದಲ್ಲಿ ನಡೆದ ಅರೆಭಾಷೆ ಗಡಿನಾಡ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಮದೆನಾಡು ಬಳಿ ಕೊಡಗು ಗೌಡ ಸಮಾಜದ ಅಭಿವೃದ್ಧಿಗೆ ಸರ್ಕಾರದಿಂದ ೬ ಎಕರೆ ಭೂಮಿ ಕಾಯ್ದಿರಿಸಿದೆ. ಹಾಗೆಯೇ ಭಾಗಮಂಡಲ ಗೌಡ ಸಮಾಜ ನೂತನ ಕಟ್ಟಡ ನಿರ್ಮಾಣಕ್ಕೆ ಒಂದು ಕೋಟಿ ರೂ. ನಿಗದಿ ಮಾಡಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಬೆಂಗಳೂರಿನಲ್ಲಿ ನವೆಂಬರ್ ತಿಂಗಳಲ್ಲಿ ನಡೆದ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದಂತೆ ೬ ಎಕರೆ ಭೂಮಿ ನೀಡಿದ್ದಾರೆ. ಹಾಗೆಯೆ ಭಾಗಮಂಡಲ ಗೌಡ ಸಮಾಜ ನೂತನ ಕಟ್ಟಡ ನಿರ್ಮಾಣಕ್ಕೆ ಒಂದು ಕೋಟಿ ರೂ. ಪ್ರಕಟಿಸಿದ್ದರು. ಅದರಂತೆ ಮುಖ್ಯಮಂತ್ರಿ ಹಾಗೂ

ಉಪ ಮುಖ್ಯಮಂತ್ರಿ ಅವರು ನುಡಿದಂತೆ ನಡೆದಿದ್ದು,

ಸರ್ಕಾರ ಎಲ್ಲಾ ಸಮಾಜಗಳ ಶ್ರೇಯೋಭಿವೃದ್ಧಿಗೆ ಬದ್ಧವಾಗಿದೆ ಎಂದು ತಿಳಿಸಿದರು.

ಅಕಾಡೆಮಿ ಕಾರ್ಯಕ್ರಮಗಳು ಕುಗ್ರಾಮಗಳಿಗೂ ಸಹ ತಲುಪುತ್ತಿರುವುದು ಶ್ಲಾಘನೀಯ. ಗಡಿನಾಡ ಉತ್ಸವಗಳು, ಗ್ರಾಮೋತ್ಸವ ಕಾರ್ಯಕ್ರಮಗಳು ಹಳ್ಳಿಗಳಿಗೂ ತಲುಪಿದಾಗ ಅರೆಭಾಷೆ, ಸಂಸ್ಕೃತಿ, ಸಾಹಿತ್ಯ, ಪರಂಪರೆ ಮತ್ತಷ್ಟು ಗಟ್ಟಿಗೊಳಿಸಲು ಅನುಕೂಲವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಒಂದೆಡೆ ಸೇರಲು ಕಾರ್ಯಕ್ರಮ ಅನುಕೂಲವಾಗಿದೆ ಎಂದು ನುಡಿದರು.

ಕೊಡಗು ಜಿಲ್ಲೆಯಲ್ಲಿ ಸಣ್ಣ ಸಣ್ಣ ಸಮಾಜಗಳು ವಾಸಿಸುತ್ತಿದ್ದು, ತಮ್ಮದೇ ಆದ ಭಾಷೆ, ಸಂಸ್ಕೃತಿ, ಕಲೆ, ಸಂಪ್ರದಾಯಗಳನ್ನು ಒಳಗೊಂಡಿದ್ದು, ಇವುಗಳನ್ನು ಉಳಿಸಿ ಬೆಳೆಸಬೇಕು. ಆ ನಿಟ್ಟಿನಲ್ಲಿ ಅಕಾಡೆಮಿಗಳು ಕೆಲಸ ನಿರ್ವಹಿಸುತ್ತಿವೆ. ಅರೆಭಾಷೆ ಸಂಸ್ಕೃತಿ, ಸಾಹಿತ್ಯವನ್ನು ಜನ ಸಮುದಾಯದ ಅಂತರಾಳಕ್ಕೆ ತಲುಪಿಸಬೇಕು. ಇಲ್ಲಿನ ಆಹಾರ ಪದ್ಧತಿ, ಉಡುಗೆ, ತೊಡುಗೆ, ಮದುವೆ ಪದ್ಧತಿಗಳು ವಿಭಿನ್ನ ಹಾಗೂ ವೈಶಿಷ್ಟ÷್ಯತೆ ಹೊಂದಿದೆ. ಆ ನಿಟ್ಟಿನಲ್ಲಿ ಎಲ್ಲರೂ ಸಹ ಸಹೋದರತೆ, ಸಹಬಾಳ್ವೆ, ಸಾಮರಸ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವತ್ತ ಮುನ್ನಡೆಯಬೇಕು. ಯಾವುದೇ ಭಾಷೆಗೆ ಗಡಿ ಇಲ್ಲ. ಭಾಷೆಯನ್ನು ಮತ್ತಷ್ಟು ವಿಸ್ತರಿಸಿ ಬೆಳೆಸುವಲ್ಲಿ ಶ್ರಮಿಸಬೇಕು. ಆ ನಿಟ್ಟಿನಲ್ಲಿ ಕುಟುಂಬದಿAದಲೇ ಭಾಷೆ ಬೆಳವಣಿಗೆಗೆ ಪ್ರಯತ್ನಗಳು ನಡೆಯಬೇಕು. ಭಾಷೆ ಉಳಿದರೆ ಜನಾಂಗ ಉಳಿಯುತ್ತದೆ ಎಂಬುದನ್ನು ಮರೆಯಬಾರದು. ಅನಾದಿ ಕಾಲದಿಂದಲೂ ಪೂರ್ವಜರು ಉಳಿಸಿಕೊಂಡಿರುವ ಅರೆಭಾಷೆಯುನ್ನು ಉಳಿಸಬೇಕು. ಇತರ ಭಾಷೆಯನ್ನು ಗೌರವಿಸಬೇಕು ಮತ್ತು ಪ್ರೀತಿಸಬೇಕು. ಎಲ್ಲರಲ್ಲೂ ಸಹ ಸಹೋದರತೆ ಇರಬೇಕು ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಟಿ.ಎಂ.ಧರ್ಮಜ ಉತ್ತಪ್ಪ ಮಾತನಾಡಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಹಲವು ವಿಭಿನ್ನ ಹಾಗೂ ವಿಶಿಷ್ಟ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತಿರುವುದು ಅಕಾಡೆಮಿ ಕಾರ್ಯ ಚಟುವಟಿಕೆಗಳನ್ನು ತಿಳಿಸಲು ಸಹಕಾರಿಯಾಗಿದೆ. ಇದರಿಂದ ಸಾಹಿತ್ಯ ಬೆಳವಣಿಗೆಗೆ ಅನುಕೂಲವಾಗಿದೆ ಎಂದು ಹೇಳಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ ಅಕಾಡೆಮಿ ವತಿಯಿಂದ ಸುಳ್ಯ ತಾಲೂಕಿನ ಬಂದ್ಯಡ್ಕ, ಮಂಡೆಕೋಲು, ಮಡಿಕೇರಿ ತಾಲೂಕಿನ ಚೆಯ್ಯಂಡಾಣಿ, ಸೇರಿದಂತೆ ವಿವಿಧ ಕಡೆಗಳಲ್ಲಿ ಗಡಿನಾಡ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಾಗೆಯೆ ವಿವಿಧ ಕಡೆಗಳಲ್ಲಿ ಗ್ರಾಮೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಕಾಡೆಮಿ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಕ್ಕೆ ತಲುಪಿಸಲು ಶ್ರಮಿಸಲಾಗಿದೆ ಎಂದರು.

ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಜಾನಪದ ಕಲೆಗಳು ಮತ್ತಿತರ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಶ್ರಮಿಸಲಾಗುತ್ತದೆ. ಅರೆಭಾಷೆ ಸಾಂಸ್ಕೃತಿಕ ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಸಾಹಿತ್ಯ ಚಟುವಟಿಕೆಗಳನ್ನು ಬಲಪಡಿಸುವಲ್ಲಿ ಅರೆಭಾಷೆ ಪುಸ್ತಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಸದಾನಂದ ಮಾವಜಿ ವಿವರಿಸಿದರು.

ಅರೆಭಾಷೆ ಜಾತಿಯನ್ನು ಮೀರಿ ಬೆಳೆದಿದ್ದು, ರಾಜ್ಯ ಭಾಷೆಯಾಗಿದೆ. ೨೦೨೫ ರಲ್ಲಿ ಗಡಿನಾಡ ಉತ್ಸವ ಆರಂಭಿಸಿ ಹಲವು ಸಾಂಸ್ಕೃತಿಕ ಶಿಬಿರ ಏರ್ಪಡಿಸಲಾಗಿದೆ. ಅರೆಭಾಷೆಯನ್ನು ಎಲ್ಲೆಡೆ ಫಸರಿಸುವಲ್ಲಿ ಕತೆ, ಕವನ, ಸಣ್ಣ ಕತೆಗಳು, ಬರಹ, ಪ್ರೋತ್ಸಾಹಿಸುವಲ್ಲಿ ತ್ರೆöÊಮಾಸಿಕ ಹಿಂಗಾರವನ್ನು ಪ್ರಕಟಿಸಲಾಗುತ್ತಿದ್ದು, ಈ ಅವಕಾಶವನ್ನು ಅರೆಭಾಷಿಕರು ಬಳಸಿಕೊಳ್ಳಬೇಕು ಎಂದು ಕೋರಿದರು.

ಕೆದಮುಳ್ಳೂರು ಗ್ರಾಮದ ಅರೆಭಾಷೆ ಸಂಸ್ಕೃತಿ ಮತ್ತು ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಪೊಕ್ಕುಳಂಡ್ರ ಎಸ್. ದಿನೇಶ್ ಮಾತನಾಡಿ ತೋರ ಗ್ರಾಮದ ಸುತ್ತಮುತ್ತ ಅರೆಭಾಷಿಗರು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿದ್ದು, ಅರೆಭಾಷಿಕರ ಭವನ ನಿರ್ಮಾಣಕ್ಕೆ ಜಾಗ ಒದಗಿಸುವಂತಾಗಬೇಕು ಎಂದು ಮನವಿ ಮಾಡಿದರು.

ವೀರಾಜಪೇಟೆ ಗೌಡ ಸಮಾಜದ ಅಧ್ಯಕ್ಷ ಮುಕ್ಕಾಟಿ ವಾಸು ಗಣಪತಿ ಮಾತನಾಡಿ ಅಕಾಡೆಮಿ ಆರಂಭದ ನಂತರ ಅರೆಭಾಷೆ ಬೆಳವಣಿಗೆಗೆ ಹೆಚ್ಚಿನ ಸಹಕಾರ ಆಗಿದೆ. ಆ ನಿಟ್ಟಿನಲ್ಲಿ ಅರೆಭಾಷೆ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಬೇಕು ಎಂದು ಸಲಹೆ ಮಾಡಿದರು.

ಮಡಿಕೇರಿ ಕೊಡಗು ಗೌಡ ಸಮಾಜದ ನಿರ್ದೇಶಕ ತೋಟಂಬೈಲು ಕುಮಾರ ಮಾತನಾಡಿ; ಅರೆಭಾಷಿಕರಲ್ಲಿ ಮದುವೆ ಪದ್ಧತಿ ವಿಶಿಷ್ಟವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ. ಆದರೆ ಮದುವೆ ಪದ್ಧತಿಯನ್ನು ಹಿಂದಿನAತೆ ನಡೆಸಿಕೊಂಡು ಹೋಗುವಂತಾಗಬೇಕು ಎಂದು ಸಲಹೆ ಮಾಡಿದರು.

ಸದಸ್ಯ ಸಂಚಾಲಕ ಸೂದನ ಎಸ್.ಈರಪ್ಪ ಮಾತನಾಡಿ ತೋರದಂತಹ ಕುಗ್ರಾಮದಲ್ಲಿ ಕಾರ್ಯಕ್ರಮ ಮಾಡಬೇಕು ಎಂದು ಹಲವು ತಿಂಗಳಿನಿAದ ಯೋಚಿಸಿದ್ದೆ. ಆ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅರೆಭಾಷೆ ಸಂಸ್ಕೃತಿ, ಕಲೆಗಳನ್ನು ಕುಗ್ರಾಮಗಳಿಗೂ ತಲುಪಿಸುವಲ್ಲಿ ಅಕಾಡೆಮಿ ಶ್ರಮಿಸುತ್ತಿದೆ. ಆ ನಿಟ್ಟಿನಲ್ಲಿ ಶಾಸಕರ ಸಹಕಾರ ಹೆಚ್ಚಿನದ್ದಾಗಿದೆ ಎಂದರು. ಸದಸ್ಯ ಸಂಚಾಲಕರಾದ ಮೋಹನ್ ಪೊನ್ನಚನ ಅಕಾಡೆಮಿ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.

ಕೆದಮುಳ್ಳೂರು ಗ್ರಾಮದ ಜಾನಪದ ವಿಭಾಗದ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಕುಡಿಯರ ಬಿ. ಅಮ್ಮುಣಿ, ಹಿರಿಯರಾದ ಪೊಕ್ಕುಳಂಡ್ರ ಕೆ.ಪಾಪಯ್ಯ, ತೋಟಂಬೈಲು ರಾಜು ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.

ನರಿಯಂದಡ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷ ಬೆಳಿಯಂಡ್ರ ಹರಿಪ್ರಸಾದ್, ಅಕಾಡೆಮಿ ಸದಸ್ಯ ಪಿ. ಸಂದೀಪ್ ಎಂ., ತೇಜಕುಮಾರ್ ಕುಡೆಕಲ್ಲು, ಡಾ.ಎನ್.ಎ.ಜ್ಞಾನೇಶ್, ಲತಾ ಪ್ರಸಾದ್ ಕುದ್ಪಾಜೆ, ಕುದುಪಜೆ ಕೆ.ಪ್ರಕಾಶ್, ಅಕಾಡೆಮಿ ರಿಜಿಸ್ಟಾçರ್ ಚಿನ್ನಸ್ವಾಮಿ ಇತರರು ಇದ್ದರು.

ಉಳುವಾರನ ರೋಷನ್, ಕಲ್ಲುಮುಟ್ಲು ಜಸ್ಮಿ ಮತ್ತು ಚೈತ್ರ. ಬೈಮನ ಪ್ರೇಮ, ಕಾರ್ಯಕ್ರಮ ನಿರ್ವಹಣೆಗೈದರು. ಸಭಾ ಕಾರ್ಯಕ್ರಮದ ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.