ಸಿದ್ದಾಪುರ, ಮೇ ೧೪: ಕಳೆದ ಐವತ್ತು ವರ್ಷಗಳಿಂದ ನಿರಂತರವಾಗಿ ವಿದ್ಯಾಭ್ಯಾಸ ನೀಡುತ್ತಿರುವ ಎಸ್‌ಎಂಓ ಸಂಸ್ಥೆಯ ಸೇವೆ ಶ್ಲಾಘನೀಯ ಎಂದು ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದರು.

ಸಿದ್ದಾಪುರದ ಮುಸ್ಲಿಂ ಅನಾಥಾಲಯ (ಎಸ್.ಎಂ.ಓ.) ಕ್ಕೆ ೫೦ ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಿದ್ದಾಪುರದ ಮಸೀದಿಯ ಅವರಣದಲ್ಲಿ ನಡೆದ ಮಹಾಸಮ್ಮೇಳನದಲ್ಲಿ ಮಾತನಾಡಿದ ಅವರು ಮನುಷ್ಯ ಮಾನವೀಯತೆಯೊಂದಿಗೆ ಬದುಕಿದರೆ ಸಮಾಜದ ಏಳಿಗೆ ಸಾಧ್ಯ. ಕಳೆದ ಐವತ್ತು ವರ್ಷಗಳಿಂದ ಸಾರ್ಥಕ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯ ಸಾಧನೆಯೆ ಮಾನವೀಯತೆಗೆ ಉದಾಹರಣೆಯಾಗಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನೀಡುವ ಮೂಲಕ ದಾರಿ ದೀಪವಾಗಿರುವ ಸಂಸ್ಥೆಯ ನಿಸ್ವಾರ್ಥ ಸೇವೆ ಮುಂದುವರಿಯಲಿ ಎಂದು ಆಶಿಸಿದರು.

ಪ್ರಾಸ್ತಾವಿಕವಾಗಿ ಆಚರಣಾ ಸಮಿತಿ ಪ್ರಮುಖ ಕೆ.ಯು. ಮಜೀದ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶೈಖುನಾ ಎಂ.ಎA., ಅಬ್ದುಲ್ ಫೈಝಿ, ಸಮಸ್ತ ಕೇರಳ ಜಂಇಯತ್ತಲ್ ಉಲಮಾ ಅಧ್ಯಕ್ಷ ಸಯ್ಯದ್ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್, ಎಸ್‌ಎಂಎ ಅಧ್ಯಕ್ಷ ಮುಸ್ತಫ ಹಾಜಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರವೂಫ್ ಹಾಜಿ, ರಾಜ್ಯ ಅಲ್ಪಸಂಖ್ಯಾತ ಘಟಕದ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಉಪಾಧ್ಯಕ್ಷ ಪಿ.ಸಿ. ಹಸೈನಾರ್ ಹಾಜಿ, ಎಸ್‌ಎನ್‌ಡಿಪಿ ಜಿಲ್ಲಾಧ್ಯಕ್ಷ ವಿ.ಕೆ. ಲೋಕೇಶ್, ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತೀಶ್, ಹಿರಿಯ ಕಾಫಿ ಬೆಳೆಗಾರ ಎ.ಸಿ. ಸುಬ್ಬಯ್ಯ, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಶ್ರೀನಿವಾಸ್ ಹಾಗೂ ಇನ್ನಿತರರು ಹಾಜರಿದ್ದರು. ಶಾಸಕ ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.

ಎಸ್‌ಎಂಓ ಸುವರ್ಣ ಮಹೋತ್ಸವದ ಅಂಗವಾಗಿ ಕಳೆದ ಎರಡು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಮಹಿಳಾ ಸಮಾವೇಶ ಮತ್ತಿತರ ಕಾರ್ಯಕ್ರಮಗಳು ನಡೆದವು.