ಪೊನ್ನಂಪೇಟೆ, ಮೇ ೧೪: ಗೋಣಿಕೊಪ್ಪಲು ಕಾವೇರಿ ಕಾಲೇಜು ಹಾಗೂ ಕಾವೇರಿ ಕಾಲೇಜು ಅಲುಮಿನೈ ಅಸೋಸಿಯೇಷನ್ ಸಹಯೋಗದಲ್ಲಿ ದಿ. ಪುಚ್ಚಿಮಾಡ ತಿಮ್ಮಯ್ಯ, ದಿ. ಪುಚ್ಚಿಮಾಡ ಚೋಂದಮ್ಮ ತಿಮ್ಮಯ್ಯ ಹಾಗೂ ದಿ. ಪುಚ್ಚಿಮಾಡ ಮೀನಾ ಸುಬ್ಬಯ್ಯ ಅವರ ಜ್ಞಾಪಕಾರ್ಥವಾಗಿ ತಾ. ೨೨ ರಂದು ಬೆಳಿಗ್ಗೆ ೯.೩೦ ಕ್ಕೆ ಕಾವೇರಿ ಕಾಲೇಜು ಸಭಾಂಗಣದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ.
ಭಾಷಣ ಸ್ಪರ್ಧೆಯ ಕನ್ನಡ ವಿಭಾಗದಲ್ಲಿ ‘ಕೃತಕ ಬುದ್ದಿಮತ್ತೆಯು ಮನುಷ್ಯನ ಸೃಜನಶೀಲತೆಯನ್ನು ಕುಂಠಿತಗೊಳಿಸುತ್ತಿದೆಯೇ?’ ಎಂಬ ವಿಷಯ. ಆಂಗ್ಲ ಭಾಷೆ ವಿಭಾಗದಲ್ಲಿ “Iಟಿಜಿಟueಟಿಛಿe oಜಿ Wesಣeಡಿಟಿ ಅuಟಣuಡಿe oಟಿ Iಟಿಜiಚಿಟಿ Soಛಿieಣಥಿ’ ಎಂಬ ವಿಷಯದ ಬಗ್ಗೆ ಮಾತನಾಡಬೇಕು. ಒಂದು ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದ್ದು, ಕನ್ನಡ ಭಾಷಣ ಸ್ಪರ್ಧೆಯಲ್ಲಿ ಒಬ್ಬರು, ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಒಬ್ಬರು ಮಾತನಾಡಬೇಕು. ಕನ್ನಡ ಮತ್ತು ಇಂಗ್ಲಿಷ್ ವಿಭಾಗಕ್ಕೆ ಪ್ರತ್ಯೇಕ ಬಹುಮಾನ ನೀಡಲಾಗುವುದು.
ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆ ಊಟದ ವ್ಯವಸ್ಥೆ ಇರಲಿದೆ. ಕೊಡಗು ಜಿಲ್ಲೆಯ ಆಸಕ್ತ ಕಾಲೇಜು ವಿದ್ಯಾರ್ಥಿಗಳು ತಾ. ೨೦ ರೊಳಗೆ ಹೆಸರು ನೊಂದಾಯಿಸಿ ಕೊಳ್ಳಬೇಕು ಎಂದು ಪ್ರಾಂಶುಪಾಲ ಡಾ. ಎಂ. ಬಿ. ಕಾವೇರಿಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂಖ್ಯೆ ೯೭೩೧೫೬೯೧೦೩, ೯೦೦೮೭೩೭೪೮೩, ೯೦೦೮೭೨೬೩೭೦ ಸಂಪರ್ಕಿಸಬಹುದು.