ಮಡಿಕೇರಿ, ಮೇ.೧೪: ಕುಶಾಲನಗರ ತಾಲೂಕಿನ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಬ್ಯಾಡಗೊಟ ಅಂಗನವಾಡಿ ಕೇಂದ್ರದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಮತ್ತು ಪೋಕ್ಸೋ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಯಿತು.
ವೈದ್ಯಾಧಿಕಾರಿ ಡಾ ಸಾನಿಯಾ ಅವರು ಮಾತನಾಡಿ, ಹದಿಹರೆಯದ ಹೆಣ್ಣುಮಕ್ಕಳು, ಗರ್ಭಿಣಿಯರಿಗೆ ಆಗುವ ತೊಂದರೆಗಳ ಬಗ್ಗೆ ಹಾಗೂ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿಯನ್ನು ನೀಡಿದರು. ಆರೋಗ್ಯ ನಿರೀಕ್ಷಕರಾದ ಸಂಜಯ್ ಅವರು ಮಲೇರಿಯಾ, ಡೆಂಗ್ಯೂ ಮತ್ತು ಸಾಂಕ್ರಾಮಿಕ ರೋಗಗಳ ಬಗ್ಗೆ, ಪರಿಸರ ಹಾಗೂ ಚರಂಡಿಗಳ ಸ್ವಚ್ಛತೆ ಕಾಪಾಡುವದರ ಬಗ್ಗೆ, ಮುಂಜಾಗ್ರತೆ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ತಾಲ್ಲೂಕು ಮೇಲ್ವಿಚಾರಕರಾದ ಅಶ್ವಿನಿ ಅವರು ಮಗುವಿನ ಆರೈಕೆ ಹಾಗೂ ಮಗುವಿಗೆ ಹಾಕಿಸುವ ಲಸಿಕೆಗಳ ಬಗ್ಗೆ ಹಾಗೂ ಹೆಣ್ಣುಮಕ್ಕಳಿಗೆ ನೀಡುವ ಊPಗಿ ಲಸಿಕೆ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಾಗೇಂದ್ರಚಾರಿ, ಸಮುದಾಯ ಆರೋಗ್ಯ ಅಧಿಕಾರಿ ದೀಪು, ಆಶಾ ಕಾರ್ಯಕರ್ತೆಯರಾದ ಕವಿತ, ಚಂದ್ರಾವತಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಶಾಲಿನಿ ಹಾಜರಿದ್ದರು.