ಶನಿವಾರಸಂತೆ, ಮೇ ೧೪: ಇಲ್ಲಿಗೆ ಸಮೀಪದ ಆಲೂರು ಸಿದ್ದಾಪುರ ಸಮುದಾಯ ಭವನದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಶಿಕ್ಷಣ ಸಂಸ್ಥೆ, ಬೋಧಕ ಆಸ್ಪತ್ರೆ, ಶನಿವಾರಸಂತೆ ವಲಯ ಅರಣ್ಯ ಇಲಾಖೆ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ರಕ್ತ ನಿಧಿ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಹಿರಿಯ ತಜ್ಞ ವೈದ್ಯ ಡಾ. ಚೇತನ್ ಶಿಬಿರ ಉದ್ಘಾಟಿಸಿ ಮಾತನಾಡಿ, ವೈದ್ಯಕೀಯ ಸಿಬ್ಬಂದಿಗೆ ಸಾರ್ವಜನಿಕರ ಸಹಕಾರವೂ ಅತ್ಯಗತ್ಯವಾಗಿದೆ. ಎಲ್ಲರೂ ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸಬೇಕು ಹಣ ಕಳೆದುಕೊಂಡರೆ ಮತ್ತೆ ಪಡೆಯಬಹುದು. ಆದರೆ ಒಮ್ಮೆ ಆರೋಗ್ಯ ಕಳೆದುಕೊಂಡರೆ ನಾವು ಪಡೆಯುವುದು ಕಷ್ಟಕರ. ಆರೋಗ್ಯದ ಬಗ್ಗೆ ನಿಗಾವಹಿಸಬೇಕು. ಆಹಾರ ಪದ್ಧತಿಯೂ ಆರೋಗ್ಯಕರವಾಗಿರಬೇಕು. ಆರೋಗ್ಯ ಏರುಪೇರಾದಾಗ ನಿರ್ಲಕ್ಷö್ಯ ಮಾಡದೆ ವೈದ್ಯರನ್ನು ಸಂಪರ್ಕಿಸಬೇಕೆAದು ಸಲಹೆ ನೀಡಿದರು.

ಶನಿವಾರಸಂತೆ ವಲಯ ಅರಣ್ಯಧಿಕಾರಿ ಪೂಜಾಶ್ರೀ ಮಾತನಾಡಿ, ಇಂದು ಗ್ರಾಮೀಣ ಭಾಗದ ಜನರು ಅದರಲ್ಲೂ ರೈತರು ಹೆಚ್ಚು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದು, ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಈ ನಿಟ್ಟಿನಲ್ಲಿ ಇಲಾಖೆ ನಿಮ್ಮ ಮನೆ ಬಾಗಿಲಿಗೆ ಈ ಆರೋಗ್ಯ ಶಿಬಿರ ಹಮ್ಮಿಕೊಳ್ಳುವ ಯೋಜನೆ ರೂಪಿಸಿದೆ ಎಂದರು. ವೇದಿಕೆಯಲ್ಲಿ ಉಪವಲಯ ಅರಣ್ಯಧಿಕಾರಿ ಮಲ್ಲಯ್ಯ, ವನಪಾಲಕ ವೆಂಕಟೇಶ್, ರಮೇಶ್, ಪುನೀತ್, ದಂತ ವೈದ್ಯ ನಚಿಕೇತ್, ಮೂಳೆ ತಜ್ಞ ಅಭಿಜಿತ್, ಕಾರ್ತಿಕ್ ಮುಂತಾದವರಿದ್ದರು.

ಶಿಬಿರದಲ್ಲಿ, ಕಿವಿ, ಮೂಗು, ಗಂಟಲು ತಜ್ಞರು, ಚರ್ಮ ರೋಗ ತಜ್ಞರು, ಕೀಲು ಮೂಳೆ ತಜ್ಞರು, ಸ್ತಿçÃರೋಗ ತಜ್ಞರು, ದಂತ ವೈದ್ಯರು ಸೇರಿದಂತೆ ವಿವಿಧ ತಜ್ಞರು ಕಾಯಿಲೆಗಳಿಗೆ ಸಂಬAಧ ರೋಗಿಗಳಿಗೆ ತಪಾಸಣೆ ನಡೆಸಿದರು. ಶಿಬಿರದಲ್ಲಿ ಆಲೂರು ಸಿದ್ದಾಪುರ ಸುತ್ತಮುತ್ತಲಿನ ಸಾರ್ವಜನಿಕರು ಪಾಲ್ಗೊಂಡು ಶಿಬಿರದ ಲಾಭ ಪಡೆದುಕೊಂಡರು.