ನಾಪೋಕು,್ಲ ಮೇ ೧೫: ಕಕ್ಕಬೆಯ ಪಾಡಿ ಶ್ರೀ ಇಗುತ್ತಪ್ಪ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಮೂರನೇ ದಿನವಾದ ಶುಕ್ರವಾರ ವಿವಿಧ ಹೋಮ, ಪೂಜಾ ವಿಧಿವಿಧಾ£ ಶ್ರದ್ಧಾಭಕ್ತಿಯಿಂದ ನೆರವೇರಿತು.
ನೀಲೇಶ್ವರ ಉಚ್ಚಿಲತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಗಣಪತಿ ಹೋಮ, ಅಂಕುರ ಪೂಜೆ, ಶಾಂತಿ ಹೋಮಗಳು, ಹೋಮ ಕಲಶಾಭಿಷೇಕ ಬಳಿಕ ತೀರ್ಥ ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಜರುಗಿತು. ರಾತ್ರಿ ಅಂಕುರ ಪೂಜೆ, ದುರ್ಗಾ ನಮಸ್ಕಾರ ಪೂಜೆಗಳು ಜರುಗಿದವು.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಚಮಂಡ ರಾಜ ಪೂವಣ್ಣ, ಭಕ್ತ ಜನ ಸಂಘದ ಅಧ್ಯಕ್ಷ ಸುಮನ್ ಸುಬ್ರಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ತಾ. ೧೬ ರಂದು (ಇಂದು) ಬೆಳಿಗ್ಗೆ ೭ ಗಂಟೆಯಿAದ ಗಣಪತಿ ಹೋಮ, ಅಂಕುರ ಪೂಜೆ, ತತ್ವ ಹೋಮ, ತತ್ವ ಕಲಶ ಪೂಜೆ, ತತ್ವ ಕಲಶಾಭಿಷೇಕ, ಮಧ್ಯಾಹ್ನ ಪೂಜಾ ಮಂಟಪ ನಮಸ್ಕಾರ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ಜರುಗಲಿದೆ. ರಾತ್ರಿ ಅಂಕುರ ಪೂಜೆ ದುರ್ಗಾ ನಮಸ್ಕಾರ ಪೂಜೆ ನಡೆಯಲಿದೆ.