ಮಡಿಕೇರಿ, ಮೇ ೧೫: ಮಡಿಕೇರಿಯ ಹೊರವಲಯದಲ್ಲಿ ಕೊಡವ ಹೆರಿಟೇಜ್ ಕೇಂದ್ರವನ್ನು ಮಡಿಕೇರಿ ಕೊಡವ ಸಮಾಜಕ್ಕೆ ನೀಡುವ ಕುರಿತು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ನೇತೃತ್ವದಲ್ಲಿ ಚರ್ಚೆ ನಡೆಯಿತು. ಮಡಿಕೇರಿಯ ಸುದರ್ಶನ್ ಅತಿಥಿಗೃಹದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೊಡವ ಸಮಾಜದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಶಾಸಕರಿಗೆ ಮನವಿ ಸಲ್ಲಿಸಿದರು. ಸಭೆಯಲ್ಲಿ ಮಾತನಾಡಿದ ಶಾಸಕ ಡಾ. ಮಂತರ್ ಗೌಡ ಅವರು, ಮಡಿಕೇರಿ ಕೊಡವ ಸಮಾಜವು ಉತ್ತಮ ರೀತಿಯಲ್ಲಿ ಸಂಸ್ಥೆಯನ್ನು ನಿರ್ವಹಿಸುವ ವಿಶ್ವಾಸವಿದ್ದು, ಕೊಡವ ಹೆರಿಟೇಜ್ ಕೇಂದ್ರದ ಜವಾಬ್ದಾರಿಯನ್ನು ಕೊಡವ ಸಮಾಜಕ್ಕೆ ನೀಡುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಹಾಜರಿದ್ದ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರಿಗೆ ಮಾರ್ಗದರ್ಶನ ನೀಡಿದರು.
ಸನ್ಮಾನ
ಶಾಸಕ ಡಾ. ಮಂತರ್ ಗೌಡ ಅವರು ಶಾಸಕರಾಗಿ ಆಡಳಿತಕ್ಕೆ ಮೂರು ವರ್ಷ ಪೂರೈಸಿದ ಹಾಗೂ ಕೊಡವ ಸಮಾಜಕ್ಕೆ ಸಂಪೂರ್ಣ ಸಹಕಾರ ನೀಡಿದ ಹಿನ್ನೆಲೆ ಮಡಿಕೇರಿ ಕೊಡವ ಸಮಾಜದ ವತಿಯಿಂದ ಒಡಿಕತ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಸಮಾಜದ ಅಧ್ಯಕ್ಷ ಮಂಡುವAಡ ಮುತ್ತಪ್ಪ, ಮಾಜಿ ಎಂಎಲ್ಸಿ ಶಾಂತೆಯAಡ ವೀಣಾ ಅಚ್ಚಯ್ಯ, ಜಂಟಿ ಕಾರ್ಯದರ್ಶಿ ನಂದಿನೆರವAಡ ದಿನೇಶ್, ನಿರ್ದೇಶಕರಾದ ನಂದಿನೆರವAಡ ರವಿ ಬಸಪ್ಪ, ಮೂವೆರ ಜಯರಾಂ, ಶಾಂತೆಯAಡ ವಿಶಾಲ್ ಕಾರ್ಯಪ್ಪ, ಪುತ್ತರಿರ ಕರುಣ್ ಕಾಳಯ್ಯ, ಮಂಡಿರ ಸದಾ ಮುದ್ದಪ್ಪ, ಕನ್ನಂಡ ಕವಿತಾ ಬೊಳ್ಳಪ್ಪ, ಪೆಮ್ಮುಡಿಯಂಡ ಉತ್ತಪ್ಪ, ಪುಲ್ಲೇರ ವಸಂತ ಹಾಗೂ ಪಾಲೆಯಂಡ ರೂಪಾ, ಕೂಪದಿರ ಜೂನ ವಿಜಯ್, ಶಾಂತೆಯAಡ ಶ್ವೇತಾ ಕಾರ್ಯಪ್ಪ ಉಪಸ್ಥಿತರಿದ್ದರು.