ಸಿದ್ದಾಪುರ, ಮೇ ೧೫: ಗುಹ್ಯ ಗ್ರಾಮದಲ್ಲಿ ಕಾಡಾನೆಗಳು ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದು, ಕೃಷಿ ಫಸಲನ್ನು ನಾಶ ಮಾಡುತ್ತಿವೆೆ.

ಗುಹ್ಯ ಗ್ರಾಮದ ಕಕ್ಕಟ್ಟುಕಾಡು, ಗುಹ್ಯ ಅಗಸ್ತ್ಯೇಶ್ವರ ದೇವಾಲಯ, ಪದ್ಮ ಎಸ್ಟೇಟ್ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಕಳೆದ ಒಂದು ವಾರಗಳಿಂದ ಕಾಡಾನೆ ಹಿಂಡು ಬೀಡುಬಿಟ್ಟಿದೆ. ಹಿಂಡಿನಲ್ಲಿ ಮರಿ ಆನೆಗಳು ಸೇರಿದಂತೆ ಸುಮಾರು ೧೮ ಕ್ಕೂ ಹೆಚ್ಚು ಕಾಡಾನೆಗಳಿದ್ದು, ಕಾಫಿ ತೋಟದಲ್ಲಿ ಗಿಡಗಳನ್ನು ನಾಶ ಮಾಡುತ್ತಿವೆÉ. ಗುಹ್ಯ ಗ್ರಾಮದ ಕಕ್ಕಟ್ಟುಕಾಡುವಿನ ವಿದ್ಯಾರ್ಥಿಗಳು ಪಟ್ಟಣದಿಂದ ಮನೆಗೆ ತೆರಳುವ ವೇಳೆ ಹಿಂಡಿನಲ್ಲಿದ್ದ ಕಾಡಾನೆಯೊಂದು ದಾಳಿಗೆ ಮುಂದಾಗಿದ್ದು, ಕೂದಲೆಳೆ ಅಂತರದಲ್ಲಿ ವಿದ್ಯಾರ್ಥಿಗಳು ತಪ್ಪಿಸಿಕೊಂಡಿದ್ದಾರೆ. ಕಾಡಾನೆ ಉಪಟಳದಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.