ಮಡಿಕೇರಿ, ಮೇ ೧೫: ರಾಜಸೀಟು ಉದ್ಯಾನವನ ಪುಟಾಣಿ ರೈಲು ವಿಭಾಗದಲ್ಲಿ ಸುಮಾರು ರೂ. ೨ ಕೋಟಿ ವೆಚ್ಚದಲ್ಲಿ ಸಾರ್ವಜನಿಕ-ಖಾಸಗಿ ಪಾಲುದಾರಿಕೆಯಡಿ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗುತ್ತಿದ್ದು, ಪ್ರವಾಸಿಗರಿಗೆ ಶುದ್ಧ ಹಾಗೂ ಗುಣಮಟ್ಟದ ಆಹಾರ ಪೂರೈಸುವುದು ಉದ್ದೇಶವಾಗಿದೆ ಎಂದು ಡಾ. ಮಂತರ್ ಗೌಡ ಹೇಳಿದರು.

ರಾಜಸೀಟು ಉದ್ಯಾನವನದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಗುಣಮಟ್ಟದ ಆಹಾರ ನೀಡುವುದರ ಜೊತೆಗೆ ಪರಿಸರ ಶುಚಿತ್ವಕ್ಕೆ ಒತ್ತು ನೀಡುವುದು ಆದ್ಯತೆಯಾಗಿದೆ. ಪುಟಾಣಿ ರೈಲು ಮಾರ್ಗದಲ್ಲಿ ಯಾವುದೇ ರೀತಿ ತೊಂದರೆಯಾಗದAತೆ ಫುಡ್ ಕೋರ್ಟ್ ನಿರ್ಮಾಣ ಮಾಡಲಾಗುತ್ತಿದೆ. ಪುಟಾಣಿ ರೈಲು ಸಂಬAಧ ದಕ್ಷಿಣ ಭಾಗದ ನೈರುತ್ಯ ರೈಲ್ವೆ ವಿಭಾಗದವರು ವರದಿ ನೀಡಿದ್ದು, ವಿದ್ಯುತ್ ಚಾಲಿತ ಪುಟಾಣಿ ರೈಲು ಆರಂಭಿಸಲು ಪ್ರಯತ್ನಿ ಸಲಾಗುವುದು. ಫುಡ್‌ಕೋರ್ಟ್ ಕಾಮಗಾರಿಯು ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದ್ದು, ಪ್ರವಾಸಿಗರ ಅನುಕೂಲಕ್ಕೆ ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸಲಹೆ ಮಾಡಿದರು.

ಇದರೊಂದಿಗೆ ರಾಜಾಸೀಟ್ ಉದ್ಯಾನದಲ್ಲಿ ಹೂವಿನ ಗಿಡಗಳ ಕೊರತೆ ಇದೆ, ವಾತಾವರಣಕ್ಕೆ ತಕ್ಕಂತೆ ಗಿಡಗಳನ್ನು ಬೆಳೆಸುವ ಮೂಲಕ ಉದ್ಯಾನವನ್ನು ಅಭಿವೃದ್ಧಿಪಡಿಸುವಂತೆ ತೋಟಗಾರಿಕಾ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮಾತನಾಡಿ, ರಾಜಸೀಟು ಉದ್ಯಾನವನಕ್ಕೆ ಪ್ರತೀ ವರ್ಷದ ೬೫ ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಿದ್ದು, ರಾಜಸೀಟನ್ನು ಅಭಿವೃದ್ಧಿಪಡಿಸುವುದು ಅತ್ಯಗತ್ಯವಾಗಿದೆ. ಪುಟಾಣಿ ರೈಲು ಜಾಗಕ್ಕೆ ಯಾವುದೇ ರೀತಿಯಲ್ಲಿ ಧಕ್ಕೆ ಆಗದಂತೆ ಫುಡ್ ಕೋರ್ಟ್ ನಿರ್ಮಾಣ ಮಾಡಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು, ಪರಿಸರ ಶುಚಿತ್ವಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.

ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ ಮಾತನಾಡಿ, ಫುಡ್ ಕೋರ್ಟ್ ಅಗತ್ಯವಾಗಿದ್ದು, ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ಇದರೊಂದಿಗೆ ಈ ಹಿಂದೆ ಇದ್ದಂತಹ ಪುಟಾಣಿ ರೈಲು ಮತ್ತೆ ಚಲಿಸುವಂತಾಗಲಿ. ಮಡಿಕೇರಿ ನಗರದ ಅಭಿವೃದ್ಧಿಗೆ ನಗರಸಭೆ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಮಡಿಕೇರಿ ನಗರ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಆ ನಿಟ್ಟಿನಲ್ಲಿ ಅಭಿವೃದ್ಧಿ ಕೆಲಸಕ್ಕೆ ಸದಾ ಕೈಜೋಡಿಸಲಾಗುವುದು ಎಂದು ಹೇಳಿದರು.

ನಗರಸಭೆ ವಾರ್ಡ್ ಸದಸ್ಯೆ ಸಬಿತಾ ಮಾತನಾಡಿ, ರಾಜಸೀಟು ಉದ್ಯಾನವನ ಮತ್ತಷ್ಟು ಹಸಿರುಮಯವಾಗಬೇಕು. ಕುಂಡಗಳು, ಹೂಗಳು ಇನ್ನಷ್ಟು ಆಕರ್ಷಣೀಯವಾಗಬೇಕು. ಗಿಡಗಳನ್ನು ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಹೆಚ್ಚಿಸಬೇಕು. ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ನುಡಿದರು.

ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್, ಅರುಣ್ ಶೆಟ್ಟಿ, ಶಾರದ ನಾಗರಾಜು, ಮುದ್ದುರಾಜು, ಸದಾ ಮುದ್ದಪ್ಪ, ಜುಲೇಕಾಬಿ, ನಗರಸಭಾ ಪೌರಾಯುಕ್ತ ರಮೇಶ್, ಅಭಿಯಂತರ ಹೇಮರಾಜು, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎ. ಲೋಕೇಶ್ ಕುಮಾರ್, ಕಾಂಗ್ರೆಸ್ ಮಾಧ್ಯಮ ವಕ್ತಾರ ಟಿ.ಪಿ. ರಮೇಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ್ ಇದ್ದರು. ತೆನ್ನಿರಾ ಮೈನಾ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.