ಮಡಿಕೇರಿ, ಮೇ. ೧೫ : ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಪ್ರಬಾರ ಉಪನಿರ್ದೇಶಕರಾಗಿ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾಗಿರುವ ಶಶಿಧರ್ ಅವರನ್ನು ನಿಯುಕ್ತಿಗೊಳಿಸಿ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.
ಈ ತನಕ ಜಿಲ್ಲಾ ಉಪ ವಿಭಾಗಾಧಿಕಾರಿಯಾಗಿರುವ ನಿತಿನ್ ಚಕ್ಕಿ ಅವರು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರೂ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಶಶಿಧರ್ ಅವರನ್ನು ಈ ಸ್ಥಾನಕ್ಕೆ ನಿಯೋಜಿಸಲಾಗಿದೆ. ಆಡಳಿತಾತ್ಮಕ ದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಪ್ರಬಾರವಾಗಿ ನೇಮಕ ಮಾಡಿರುವುದಾಗಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.