ಸುಂಟಿಕೊಪ್ಪ,ಮೇ. ೧೬: ಸುಂಟಿಕೊಪ್ಪ ಠಾಣಾ ವ್ಯಾಪ್ತಿಯ ಹೇರೂರಿನ ಗಿರಿಜನ ಹಾಡಿಯೊಳಗೆ ಅಕ್ರಮವಾಗಿ ಕ್ರೆöÊಸ್ತ ಪ್ರಾರ್ಥನಾ ಮಂದಿರ ಕಟ್ಟಿದ್ದು ಮಾತ್ರವಲ್ಲದೆ ಅದರ ಉದ್ಘಾಟನೆಗೆಂದು ಆಗಮಿಸಿದ ತಮಿಳುನಾಡು ಮೂಲದ ವ್ಯಕ್ತಿಗಳನ್ನು ಸುಂಟಿಕೊಪ್ಪ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.

ಶನಿವಾರದಂದು ನೆರೆಯ ರಾಜ್ಯ ತಮಿಳುನಾಡಿನಿಂದ ೨ -೪ ಟಿಟಿ ವಾಹನಗಳಲ್ಲಿ ಆಗಮಿಸಿದ ವ್ಯಕ್ತಿಗಳು ಆಕ್ರಮ ಕಟ್ಟಡದಲ್ಲಿ ಟೇಪ್ ಕತ್ತರಿಸಿ ಉದ್ಘಾಟನೆಗೆ ಮುಂದಾಗಿದ್ದನ್ನು ಸ್ಥಳೀಯ ಗ್ರಾಮಸ್ಥರು ಹಾಗೂ ಮುಖಂಡರೊAದಿಗೆ ಸೇರಿ ಪ್ರಶ್ನಿಸಿದ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂದೋಡಿ ಜಗನ್ನಾಥ್, ಚಂದ್ರಶೇಖರ್ ಹೇರೂರು ಸುಂಟಿಕೊಪ್ಪ ಪೊಲೀಸ್ ಠಾಣೆಗೆ ತೆರಳಿ ಡಿವೈಎಸ್‌ಪಿ ಚಂದ್ರಶೇಖರ್ ಅವರಿಗೆ ಲಿಖಿತ ದೂರನ್ನು ಸಲ್ಲಿಸಿದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕುಶಾಲನಗರ ವೃತ್ತ ನಿರೀಕ್ಷಕ ಪ್ರದೀಪ್, ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್‌ರಾಜ್ ಹಾಗೂ ಸಿಬ್ಬಂದಿ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಕೂಡಲೇ ಪ್ರಾರ್ಥನಾ ಮಂದಿರದ ಬಳಿಯಲ್ಲಿದ್ದವರನ್ನು ವಾಹನ ಸಮೇತ ಪೊಲೀಸ್ ಠಾಣೆಗೆ ಕರೆತಂದು, ದೂರು ದಾಖಲಿಸಿದ ಸಂದರ್ಭ ಸ್ಥಳದಲ್ಲಿ ಚಂದ್ರಶೇಖರ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್, ಅರುಣ್ ಚೆಂಗಪ್ಪ, ಗಣೇಶ್, ಚರಣ್, ಸಂಜು, ಹೇಮಚಂದ್ರ, ಗಗನ್, ಚಂದ್ರಶೇಖರ್, ಡಯಾನ್, ರಾಜೇಶ್, ದಿಶಾಂತ್, ರಮೇಶ್, ಶಿವು, ಸುನಿಲ್ ಮತ್ತಿತರರು ಇದ್ದರು.

ಸ್ಥಳಕ್ಕೆ ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಶ್ರೀಕಾಂತ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಸ್ಮ ಅವರುಗಳು ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭ ಗ್ರಾ.ಪಂ. ಮಾಜಿ ಅಧ್ಯಕ್ಷ ಜಗನ್ನಾಥ್ ಮಾತನಾಡಿ, ಇದೊಂದು ಆತಂಕಕಾರಿ ವಿಚಾರವಾಗಿದೆ. ಪರಿಶಿಷ್ಟ ಪಂಗಡಕ್ಕೆ ದೊರೆಯುವ ಎಲ್ಲಾ ಸವಲತ್ತುಗಳನ್ನು ಪಡೆದುಕೊಂಡು ಮತ್ತೊಂದು ಧರ್ಮದ ಪರಿಪಾಲನೆ ನಡೆಯುತ್ತಿದೆ. ಇಂತವರ ವಿರುದ್ದ ಸಮಾಜ ಕಲ್ಯಾಣ ಇಲಾಖೆ ಕಟ್ಟುನಿಟ್ಟಿನ ಕ್ರಮವಹಿಸಬೇಕಿದೆ. ದಿಢೀರ್ ಬೆಳವಣಿಗೆಯಲ್ಲಿ ಮನೆ ನಿರ್ಮಿಸಿಕೊಳ್ಳುತ್ತಿದ್ದಾರೆ ಎಂದು ಭಾವಿಸಿದ ಕಟ್ಟಡÀದಲ್ಲಿ ಪ್ರಾರ್ಥನಾ ಮಂದಿರ ನಿರ್ಮಿಸಿರುವುದು ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಗ್ರಾಮಸ್ಥರನ್ನು ಭೀತಿಗೊಳಿಸುವ ಕಾರ್ಯತಂತ್ರವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಾಡಿಗಳಿಗೆ ಈ ರೀತಿಯ ಕೃತ್ಯ ನಡೆಸಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬAಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಂಡು ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕೆಂದು ಬಿಜೆಪಿ ಯುವ ಮುಖಂಡ ಹೇರೂರು ಚಂದ್ರಶೇಖರ್ ಒತ್ತಾಯಿಸಿದರು.

ಸುಂಟಿಕೊಪ್ಪ ಗ್ರೇಡ್ ೧ ಗ್ರಾ.ಪಂ. ಮಾಜಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್ ಮಾತನಾಡಿ, ಇದು ಧಾರ್ಮಿಕ ಸಾಮರಸ್ಯವನ್ನು ಸಹಬಾಳ್ವೆಯನ್ನು ಕದಡುವ ಷಡ್ಯಂತ್ರದ ಒಂದು ಭಾಗವಾಗಿದೆ ಸಂಬAಧಿಸಿದ ಇಲಾಖೆಯು ಸ್ಥಳೀಯ ಅಧಿಕಾರಿಗಳ ಮೂಲಕ ಹಾಡಿಗಳಲ್ಲಿ ಯಾವ ಕಾರ್ಯಚಟುವಟಿಕೆಗಳು ನಡೆಯುತ್ತಿದೆ ಎಂದು ಪರಿಶೀಲಿಸಿದರೆ ಈ ರೀತಿಯ ಬೆಳವಣಿಗೆಗಳು ಆಗುತ್ತಿರಲಿಲ್ಲ ಎಂದರಲ್ಲದೆ ಸಂಬAಧಿಸಿದ ಇಲಾಖೆ ಪೊಲೀಸ್ ಇಲಾಖೆಗೆ ಸೂಕ್ತ ದೂರನ್ನು ಸಲ್ಲಿಸುವ ಮೂಲಕ ಹಾಡಿಯಲ್ಲಿ ನಡೆದಿರುವ ಆಕ್ರಮ ಚಟುವಟಿಕೆಯ ಪೂರ್ಣ ವಿವರವನ್ನು ಸಾರ್ವಜನಿಕರ ಮುಂದೆ ಇಡಬೇಕು ಇಲ್ಲದಿದ್ದಲ್ಲಿ ಕಾಲಾವಕಾಶ ನೀಡಿ ಪ್ರತಿಭಟನೆ ಹಮ್ಮಿಕೊಳ್ಳುವ ಬಗ್ಗೆಯೂ ಚಿಂತಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದೇ ಸಂದರ್ಭ ಹಾಡಿಯ ನಿವಾಸಿಗಳು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಯಾಯಿತು.

ಹಿಂದೂ ಜಾಗರಣ ವೇದಿಕೆ ಖಂಡನೆ

ಸ್ಥಳೀಯಾಡಳಿತದ ಯಾವುದೇ ಪರವಾನಗಿ ಪಡೆಯದೆ, ಅಕ್ರಮ ಕಟ್ಟಡ ನಿರ್ಮಿಸಿಕೊಂಡು, ತಮಿಳುನಾಡಿನಿಂದ ಜನರನ್ನು ಕರೆಸಿಕೊಂಡು, ಪ್ರಾರ್ಥನೆಯ ಹೆಸರಲ್ಲಿ ಅನ್ಯ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿರುವ ಘಟನೆಯನ್ನು ಹಿಂದೂ ಜಾಗರ ಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ.

ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ದುರ್ಬಲರು ವಾಸಿಸುವ ಪ್ರದೇಶಗಳಲ್ಲಿನ ಅಮಾಯಕ ಹಿಂದೂಗಳನ್ನೇ ಗುರಿಯಾಗಿಸಿಕೊಂಡು, ಅವರುಗಳಿಗೆ ಬೇರೆ ಬೇರೆ ರೀತಿಯ ಆಮಿಷವೊಡ್ಡಿ, ಅವರುಗಳ ಮನ ಪರಿವರ್ತನೆ ಮಾಡಿ ನಂತರ ಕ್ರೆöÊಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿರುವ ವ್ಯವಸ್ಥಿತ ಜಾಲ ಇದಾಗಿದ್ದು ಈ ಜಾಲದ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು.

ತಪ್ಪಿದ್ದಲ್ಲಿ ಹಿಂದೂ ಜಾಗರಣ ವೇದಿಕೆಯು ಜಿಲ್ಲೆಯ ಬಹುಸಂಖ್ಯಾತ ಹಿಂದೂಗಳನ್ನು ಸಂಘಟಿಸಿ ಸುಂಟಿಕೊಪ್ಪ ಪೊಲೀಸ್ ಠಾಣೆ ಎದುರು ಧರಣಿ ಸತ್ಯಾಗ್ರಹ ನಡೆಸಲಿದೆ ಎಂದು ಹಿಂದೂ ಜಾಗರಣಾ ವೇದಿಕೆ ಕೊಡಗು ಜಿಲ್ಲಾ ಸಂಯೋಜಕ ಬೋಜೇಗೌಡ ತಿಳಿಸಿದರು.

- ರಾಜು ರೈ