ಮಡಿಕೇರಿ, ಮೇ ೧೭: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ವತಿಯಿಂದ ಇಲಾಖಾ ಯೋಜನೆಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜೆಂಡರ್ ಸ್ಪೆಷಲಿಸ್ಟ್ ಕೇಶಿನಿ ಎಸ್.ಆರ್ ಅವರು ಕಾರ್ಯಕ್ರಮ ಉದ್ಘಾಟಸಿ ಮಾತನಾಡಿ, ಜಿಲ್ಲಾ ಮಹಿಳಾ ಸಬಲೀಕರಣ ಘಟಕವು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ರಕ್ಷಣೆ, ಭದ್ರತೆ ಒದಗಿಸಲು ಇರುವ ಯೋಜನಾ ಘಟಕವಾಗಿದ್ದು, ಮಹಿಳೆಯರು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದಂತಹ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಖಿ ಒನ್ ಸ್ಟಾಪ್ ಸೆಂಟರ್‌ಗೆ ಭೇಟಿ ನೀಡಿ ದೂರನ್ನು ಸಲ್ಲಿಸಬಹುದು ಎಂದರು.
ಇಲ್ಲಿ ೨೪x೭ ಕರ್ತವ್ಯ ನಿರ್ವಹಿಸುತ್ತಿದ್ದು, ತುರ್ತು ರಕ್ಷಣೆ ಮತ್ತು ಆಶ್ರಯ, ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ, ವೈದ್ಯಕೀಯ ನೆರವು, ಆಸ್ಪತ್ರೆಗೆ ದಾಖಲು ಮತ್ತು ಚಿಕಿತ್ಸೆ, ಕಾನೂನು ನೆರವು, ಎಫ್‌ಐಆರ್ ದಾಖಲಿಸಲು ಮತ್ತು ಕಾನೂನು ಸಲಹೆ, ಆಪ್ತ ಸಮಾಲೋಚನೆ, ಮಾನಸಿಕ ಸ್ಥೆöÊರ್ಯ ತುಂಬಲು ಸಹಕಾರ ನೀಡಲಾಗುವುದು ಎಂದರು. ‘೧೮೧’ ಮಹಿಳಾ ಸಹಾಯವಾಣಿಯ ಮೂಲಕ ದೂರು ನೀಡಿ ಸಹಾಯ ಪಡೆದುಕೊಳ್ಳಬಹುದು. ೧೧೨ ತುರ್ತು ಸಹಾಯವಾಣಿಯಾಗಿದ್ದು ನಿಮಗೆ ಅಗತ್ಯವಿರುವಾಗ ತುರ್ತು ಕರೆಯನ್ನು ಮಾಡಿ ರಕ್ಷಣೆಯನ್ನು ಪಡೆದುಕೊಳ್ಳಬಹುದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಬೇಟಿ ಬಚಾವೋ ಬೇಟಿ ಪಡಾವೋ (ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಗುವನ್ನು ಓದಿಸಿ) ಎಂಬುದು ಭಾರತ ಸರ್ಕಾರದ ಒಂದು ಮಹತ್ವದ ರಾಷ್ಟಿçÃಯ ಅಭಿಯಾನವಾಗಿದ್ದು, ಕುಸಿಯುತ್ತಿರುವ ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಸರಿಪಡಿಸಲು ಮತ್ತು ಹೆಣ್ಣು ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸುವ ಉದ್ದೇಶವಾಗಿದೆ. ಹೆಚ್ಚಿನ ಆಸಕ್ತಿಯನ್ನು ಶಿಕ್ಷಣಕ್ಕೆ ನೀಡಿ ಎಂದರು.
ಅಕ್ಕಪಡೆ (ಅಕ್ಕ ಫೋರ್ಸ್) ಎಂಬುದು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಜಂಟಿ ಯೋಜನೆಯಾಗಿದ್ದು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಇದನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯು ರಾಜ್ಯದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ತಕ್ಷಣದ ರಕ್ಷಣೆ ಮತ್ತು ನೆರವು ನೀಡುವ ಉದ್ದೇಶ ಹೊಂದಿದೆ. ಮಕ್ಕಳ ಸಹಾಯವಾಣಿಯು ಕರ್ನಾಟಕ ಮತ್ತು ಭಾರತದಾದ್ಯಂತ ಮಕ್ಕಳ ರಕ್ಷಣೆಗಾಗಿ ಇರುವ ೧೦೯೮ ಮಕ್ಕಳ ಸಹಾಯವಾಣಿಯಾಗಿದೆ ಎಂದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ನಿರ್ಮಲಾ ಎಚ್.ಪಿ ಅವರು ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಉತ್ತಮವಾದ ಮಾಹಿತಿ ಕಾರ್ಯಾಗಾರ ಹಮ್ಮಿಕೊಂಡಿದೆ. ಮಹಿಳೆಯರ ರಕ್ಷಣೆ, ಸಬಲೀಕರಣಕ್ಕಾಗಿ ಅಕ್ಕ ಪಡೆ ಎಂಬ ಉತ್ತಮ ಸೇವೆಯನ್ನು ನಮಗೆ ನೀಡಲಾಗಿದೆ. ಇದು ಶ್ಲಾಘನೀಯ. ಇಂದು ಮಹಿಳೆಯರಿಗೆ ಸರ್ಕಾರ ಹಲವಾರು ಯೋಜನೆಗಳನ್ನು ತಂದಿದೆ ಎಂದರು.
ಕಾರ್ಯಕ್ರಮದಲ್ಲಿ ಅಕ್ಕಪಡೆ ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಇತರೆ ಸಿಬ್ಬಂದಿಗಳು ಹಾಜರಿದ್ದರು.