ಮಡಿಕೇರಿ, ಮೇ ೧೭: ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಾಯತ್ತ ಸಂಸ್ಥೆಯಾಗಿರುವ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ(ಎAಪ್ರಿ)ಯು, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ ಕೊಡಗು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ ತರಬೇತಿ ಕಾರ್ಯಾಗಾರ ಆಯೋಜಿಸಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮುಖ್ಯ ಯೋಜನಾಧಿಕಾರಿಗಳಾದ ಅಬ್ದುಲ್ ನಬಿ ಅವರು ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಅವರು ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿಗಳಾದ ಡಾ.ಶೃತಿ ಅವರು ಹಾಗೂ ಬೆಂಗಳೂರಿನ ಜಲ ಸಂಪನ್ಮೂಲ ತಜ್ಞರಾದ ಎಸಿಐಡಬ್ಲುö್ಯಆರ್ಎಂ ಡಾ.ಶಶಿಕುಮಾರ್ ಅವರು ಉಪಸ್ಥಿತರಿದ್ದರು. ಗಣ್ಯರು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ, ಹವಾಮಾನ ಬದಲಾವಣೆಗೆ ಅನೇಕ ಕಾರಣಗಳಿದ್ದು, ಈ ಬಗ್ಗೆ ಕಾಲ ಕಾಲಕ್ಕೆ ಮಾಹಿತಿ ನೀಡುವಂತಾಗಬೇಕು ಎಂದರು.
ಕೆಪಿಐಗಳ ಅನುಷ್ಠಾನಕ್ಕೆ ತರಲು ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ತಿಳಿಸಿ, ತರಬೇತಿ ಆಯೋಜಿಸಿದ ಎಂಪ್ರಿ, ಕೆಎಸ್ಸಿಎಸ್ಟಿ ಗೆ ಪ್ರಶಂಸೆಯನ್ನು ತಿಳಿಸಿ ತರಬೇತಿಯ ಪೂರ್ಣ ಉಪಯೋಗ ಪಡೆಯಲು ಭಾಗವಹಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬಿ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ತರಬೇತಿ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಣ ಸಂಸ್ಥೆಗಳ ಸದಸ್ಯರು ಹಾಗೂ ಇತರೆ ಪಾಲುದಾರರು ಭಾಗವಹಿಸಿದ್ದರು.
ಡಾ.ಶೃತಿ ಅವರು “ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ” ಕುರಿತು ಸವಿಸ್ತಾರವಾಗಿ ವಿವರಣೆ ನೀಡಿದರು. ಕಾರ್ಯನೀತಿ, ಕಾರ್ಯತಂತ್ರಗಳು, ವಿವಿಧ ಇಲಾಖೆಗಳ ಪಾತ್ರ ಹಾಗೂ ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮಗಳು ಮತ್ತು ಜಿಲ್ಲಾಸ್ಥರದ ದತ್ತಾಂಶಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಜಲ ಸಂಪನ್ಮೂಲ ವಲಯಕ್ಕೆ ಸಂಬAಧಿಸಿದ ಹವಾಮಾನ ಕ್ರಿಯಾ ಯೋಜನೆ ಕುರಿತು ಜಲ ಸಂಪನ್ಮೂಲ ತಜ್ಞರಾದ ಡಾ. ಶಶಿಕುಮಾರ್ ಎನ್ ಅವರು ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಯಶಸ್ಸಿಗೆ ಎನ್.ಆರ್.ಡಿ.ಎಂ.ಎಸ್ ಅಧಿಕಾರಿಗಳಾದ ಇಂಚರಾ ಅವರು ಉತ್ತಮ ಸಹಕಾರ ನೀಡಿದರು ಹಾಗೂ ದತ್ತಾಂಶ ಹಾಗೂ ಇಲಾಖೆಗಳು ಎನ್ಆರ್ಡಿಎಂಎಸ್ ಉಪಯೋಗ ಹೇಗೆ ಪಡೆಯಬೇಕು ಎಂಬ ಕುರಿತು ತಿಳಿಸಿದರು.
ಎಂಪ್ರಿ ಸಂಸ್ಥೆಯ, ತರಬೇತಿ ಸಹಾಯಕರಾದ ರಾಘವೇಂದ್ರ ಎನ್. ಹಾಗೂ ಇಐಎಸಿಪಿ ಶ್ರೀಶೈಲ್ ಅವರು ಕಾರ್ಯಕ್ರಮ ನಿರ್ವಹಿಸಿದರು.