ಮಡಿಕೇರಿ, ಮೇ ೧೮: ಅಪರಿಚಿತ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುವ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಿಸುದಾರರಿದ್ದಲ್ಲಿ ತಿಳಿಸುವಂತೆ ಪೊಲೀಸ್ ಪ್ರಕಟಣೆ ಮನವಿ ಮಾಡಿದೆ.
ಏ. ೩ ರಂದು ಮೂರ್ನಾಡಿನಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಅಂದಾಜು ೬೩ ವರ್ಷದ ಅಪರಿಚಿತ ವ್ಯಕ್ತಿಯನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ತಾ. ೧೬ ರಂದು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಚಿಕಿತ್ಸೆಗೆ ದಾಖಲಾದ ಸಂದರ್ಭ ತನ್ನ ಹೆಸರು ಜೋಸೆಫ್ ಎಂದು ತಿಳಿಸಿದ್ದು, ಇವರ ಕುರಿತು ಮಾಹಿತಿ ಇದ್ದಲ್ಲಿ ದೂರವಾಣಿ ಸಂಖ್ಯೆ ೦೮೨೭೨ ೨೨೯೩೩೩ ಅಥವಾ ೯೪೮೦೮೦೪೯೪೫ ಸಂಖ್ಯೆಗೆ ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.