ಮಡಿಕೇರಿ, ಮೇ. ೧೮: ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನಾಪೋಕ್ಲುವಿನಲ್ಲಿ ವಿವಿಧೆಡೆ ಶಾಸಕ ಎ.ಎಸ್ ಪೊನ್ನಣ್ಣ ನೇತೃತ್ವದಲ್ಲಿ ೫೦ ಕಸದ ಬುಟ್ಟಿಗಳನ್ನು ಇರಿಸಲಾಗಿದೆ. ಪ್ರಮುಖ ಕೇಂದ್ರಗಳಲ್ಲಿ ಈ ಕಸದ ಬುಟ್ಟಿಗಳನ್ನು ಇರಿಸಲಾಗಿದ್ದು, ಶಾಲೆಗಳು, ದೇವಸ್ಥಾನ, ಮಸೀದಿ, ಚರ್ಚ್ಗಳು, ಮಹಿಳಾ ಸ್ವಸಹಾಯ ಗುಂಪುಗಳಿಗೂ ವಿತರಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಕಸದ ಬುಟ್ಟಿಗಳ ಕೊರತೆ ಇರುವ ಕಾರಣ ಎಲ್ಲೆಂದರಲ್ಲಿ ಕೆಲವರು ಕಸವನ್ನು ಬಿಸಾಡುತ್ತಿದ್ದು ಸ್ವಚ್ಚತೆಗೆ ದಕ್ಕೆ ತರುತ್ತಿದ್ದಾರೆ. ಇದನ್ನು ನಿಯಂತ್ರಿಸಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ೫೦ ಕಸದ ಬುಟ್ಟಿಗಳನ್ನು ಪ್ರಮುಖ ಸ್ಥಳಗಳಲ್ಲಿ ಇರಿಸಲಾಗಿದೆ. ಶಾಸಕ ಪೊನ್ನಣ್ಣ ಅವರೊಂದಿಗೆ ಅoಜಚಿgu.ಛಿom ಕೂಡ ಕಸದ ಬುಟ್ಟಿಗಳನ್ನು ಪ್ರಾಯೋಜಿಸಿದೆ.