ಮಡಿಕೇರಿ, ಮೇ.೧೯: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ, ಸುಳ್ಯ ಕೊಡಿಯಾಲಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ‘ಅರೆಭಾಷೆನ ಸುರುನ ಕವಿ ಹೊದ್ದೆಟ್ಟಿ ಭವಾನಿಶಂಕರ’ ಇವರ ಸಾಹಿತ್ಯಾವಲೋಕನ ಮತ್ತು ಸ್ಪರ್ಧಾ ಕಾರ್ಯಕ್ರಮವು ತಾ.೨೦ ರಂದು (ಇಂದು) ಬೆಳಿಗ್ಗೆ ೯.೩೦ ಗಂಟೆಗೆ ಸುಳ್ಯ ಕೊಡಿಯಾಲಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಬೆಂಗಳೂರು ಅರೆಭಾಷೆನ ಸುರುನ ಕವಿ ಭವಾನಿಶಂಕರ ಹೊದ್ದೆಟ್ಟಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರು ಮತ್ತು ಸಾಹಿತಿ ಸೂದನ ಈರಪ್ಪ, ಸುಳ್ಯ ಕೊಡಿಯಾಲಬೈಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎನ್.ಪಿ ಸತೀಶ್ ಕುಮಾರ್, ಸಂಶೋಧಕರು ಮತ್ತು ಅರೆಭಾಷೆ ಅಕಾಡೆಮಿ ಮಾಜಿ ಸದಸ್ಯರಾದ ಎ.ಕೆ ಹಿಮಕರ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.