ಶನಿವಾರಸಂತೆ, ಮೇ ೧೯ : ಪಟ್ಟಣದ ಭಾರತಿ ವಿದ್ಯಾಸಂಸ್ಥೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಎಸ್ ಎಸ್ ಎಲ್ ಸಿ ಹಾಗೂ ಪದವಿ ಪೂರ್ವ ಕಾಲೇಜಿನ ೮ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾಸಂಸ್ಥೆ ನಿರ್ದೇಶಕ ಬಿ.ಕೆ. ಚಿಣ್ಣಪ್ಪ ಹಾಗೂ ಕಾರ್ಯದರ್ಶಿ ಎನ್.ಕೆ.ಅಪ್ಪಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಕರ, ಉಪನ್ಯಾಸಕರ ಮಾರ್ಗದರ್ಶನಲ್ಲಿ ನಿರಂತರ ಅಭ್ಯಾಸಲ್ಲಿ ತೊಡಗಿಸಿಕೊಂಡಿದ್ದರಿAದ ಉತ್ತಮ ಫಲಿತಾಂಶ ಪಡೆಯಲು ಕಾರಣವಾಯಿತು ಎಂದು ಹೇಳಿ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆ ಅಧ್ಯಕ್ಷ ಕೆ.ಎಂ.ಜಗನ್ ಪಾಲ್ ಮಾತನಾಡಿ, ವಿದ್ಯಾರ್ಥಿಗಳಿಂದ ವಿದ್ಯಾಸಂಸ್ಥೆಗೆ ಉತ್ತಮ ಫಲಿತಾಂಶ ಲಭಿಸಿರುವುದರಿಂದ ಸಂಸ್ಥೆಯ ಆಡಳಿತ ಮಂಡಳಿಗೆ ಸಂತಸವಾಗಿದೆ.ಉಪನ್ಯಾಸಕರ, ಶಿಕ್ಷಕರ ಪರಿಶ್ರಮವೂ ಕಾರಣ ಎಂದು ಪ್ರಶಂಶಿಸಿದರು.
ಸಂಸ್ಥೆಯ ಉಪಾಧ್ಯಕ್ಷ ಮಹಮ್ಮದ್ ಪಾಶ, ನಿರ್ದೇಶಕರಾದ ಎ.ಎಂ.ಆನAದ್, ಕೇಶವಮೂರ್ತಿ, ದೇವರಾಜ್, ಪದವಿ ಕಾಲೇಜು ಪ್ರಾಂಶುಪಾಲ ಎಸ್.ಎನ್.ಮೋಹನ್ ಕುಮಾರ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಜೆ.ಅಶೋಕ್, ಪ್ರೌಢಶಾಲಾ ಹಿರಿಯ ಶಿಕ್ಷಕ ಪಿ.ನರಸಿಂಹ ಮೂರ್ತಿ, ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.